ವಯನಾಡು ಭೂಕುಸಿತ 
ದೇಶ

Wayanad landslide: ಮನೆಗಳಿಗೆ ನುಗ್ಗಿ ದರೋಡೆ-ಕಳ್ಳತನ; ವಯನಾಡು ಭೂಕುಸಿತ ಸಂತ್ರಸ್ಥರ ಅಳಲು

ದುರಂತ ನಡೆದ ಸ್ಥಳದಲ್ಲಿ ಜನವಸತಿ ಇರದ ಕಾರಣ ಕಳ್ಳರು ಅದರ ಲಾಭ ಪಡೆದುಕೊಳ್ಳುತ್ತಿದ್ದು, ಮನೆಯಲ್ಲಿನ ಮೌಲ್ಯಯುತ ವಸ್ತುಗಳು ಕಳ್ಳತನವಾಗುತ್ತಿವೆ.

ವಯನಾಡು: ಭಾರಿ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದ್ದು, ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ.

ಹೌದು.. ಭೂಕುಸಿತದ ಬಳಿಕ ಸಂತ್ರಸ್ಥರನ್ನು ವಯನಾಡಿನ ಪುನರ್ವಸತಿ ಕೇಂದ್ರಗಳಿಗೆ ರವಾನೆ ಮಾಡಲಾಗುತ್ತಿದ್ದು, ಇಂತಹ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳರು ಮನೆಗಳ್ಳತನ ಮಾಡುತ್ತಿದ್ದಾರೆ. ಮನೆಗಳಲ್ಲಿಸಿಕ್ಕ ಸಿಕ್ಕ ವಸ್ತುಗಳನ್ನು ಕದ್ದು ಹೊತ್ತೊಯ್ಯುತ್ತಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಕಳ್ಳರು ನುಗ್ಗಿ ಅಳಿದುಳಿದ ವಸ್ತುಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ಜನರು ದೂರಿದ್ದಾರೆ.

ದುರಂತ ನಡೆದ ಸ್ಥಳದಲ್ಲಿ ಜನವಸತಿ ಇರದ ಕಾರಣ ಕಳ್ಳರು ಅದರ ಲಾಭ ಪಡೆದುಕೊಳ್ಳುತ್ತಿದ್ದು, ಮನೆಯಲ್ಲಿನ ಮೌಲ್ಯಯುತ ವಸ್ತುಗಳು ಕಳ್ಳತನವಾಗುತ್ತಿವೆ. ಹೀಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಈ ಹಿನ್ನೆಲೆ ಘಟನೆ ನಡೆದ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

‘ಭೂಕುಸಿತದ ಸಂದರ್ಭದಲ್ಲಿ ಪ್ರಾಣ ರಕ್ಷಣೆಗಾಗಿ ಮನೆಗಳನ್ನು ತೊರೆದು ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಆದರೆ ಪರಿಸ್ಥಿತಿ ಅವಲೋಕನಕ್ಕಾಗಿ ಮನೆಯ ಬಳಿ ತೆರಳಿದ್ದಾಗ ಬಾಗಿಲುಗಳು ಮುರಿದುಕೊಂಡಿತ್ತು, ಬಟ್ಟೆಗಳು ಹಾಗೂ ಕೆಲವು ವಸ್ತುಗಳು ನಾಪತ್ತೆಯಾಗಿವೆ’ ಎಂದು ಸಂತ್ರಸ್ತರೊಬ್ಬರು ಹೇಳಿದ್ದಾರೆ.

ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ ಪ್ರದೇಶಕ್ಕೆ ನುಗ್ಗುವವರನ್ನು ಗುರುತಿಸಿ ಶಿಕ್ಷಿಸಬೇಕು ಎಂದು ಕೆಲ ಸಂತ್ರಸ್ತರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ದುರಂತದಲ್ಲಿ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಈಗ ಮನೆಗಳಲ್ಲಿ ಅಳಿದುಳಿದ ವಸ್ತುಗಳೂ ಕೂಡ ಕಳ್ಳರ ಪಾಲಾಗುತ್ತಿವೆ. ನಾವು ತಂಗಿರುವ ರೆಸಾರ್ಟ್‌ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿದ್ದಾರೆ.

ಚೂರಲ್‌ಮಲ, ಮುಂಡಕ್ಕೈ ಗ್ರಾಮಗಳಲ್ಲಿ ಅವಶೇಷಗಳಡಿ ಸಿಲುಕಿರುವ ಮೃತದೇಹಗಳ ಪತ್ತೆ ಕಾರ್ಯ ಮುಂದುವರಿದಿದ್ದು, ರಾತ್ರಿ ಹೊತ್ತು ಪೊಲೀಸರ ಅನುಮತಿಯಿಲ್ಲದೆ ಗ್ರಾಮಕ್ಕೆ ಯಾರಿಗೂ ಪ್ರವೇಶವಿಲ್ಲ. ಹೀಗಿದ್ದೂ ಕಳ್ಳತನ ಪ್ರಕರಣಗಳ ಬಗ್ಗೆ ದೂರು ಬಂದ ಹಿನ್ನೆಲೆ ರಾತ್ರಿ ವೇಳೆ ಗಸ್ತಿಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ. ಭೂಕುಸಿತ ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಕ್ಷಣಾ ಕಾರ್ಯಾಚರಣೆಯ ಹೆಸರಿನಲ್ಲಿ ಅಥವಾ ರಾತ್ರಿಯಲ್ಲಿ ಪೊಲೀಸರ ಅನುಮತಿಯಿಲ್ಲದೆ ಪೀಡಿತ ಪ್ರದೇಶಗಳಿಗೆ ಅಥವಾ ಮನೆಗಳಿಗೆ ಪ್ರವೇಶಿಸಲು ಯಾರಿಗೂ ಅವಕಾಶವಿಲ್ಲ ಎಂದು ಖಡಕ್ ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT