ತೇಜಸ್ವಿ ಯಾದವ್, ಲಾಲು ಪ್ರಸಾದ್ 
ದೇಶ

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್, ತೇಜಸ್ವಿ ವಿರುದ್ಧ ED ಪೂರಕ ಚಾರ್ಜ್ ಶೀಟ್ ಸಲ್ಲಿಕೆ!

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ.

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಇತರ ಎಂಟು ಜನರ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ.

ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರ ಮುಂದೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಅವರು ಈ ವಿಷಯವನ್ನು ಆಗಸ್ಟ್ 13 ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ. ಸಿಬಿಐ ದಾಖಲಿಸಿದ ಎಫ್‌ಐಆರ್‌ನಿಂದ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ.

ಜಾಹೀರಾತು ನೀಡದೆ ಅಥವಾ ಸಾರ್ವಜನಿಕರ ಗಮನಕ್ಕೂ ತರದೆ ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ. ಈ ನೇಮಕಾತಿಗಾಗಿ ಭಾರತೀಯ ರೈಲ್ವೆಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಲಾಗಿದೆ ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!