ಸಾಂದರ್ಭಿಕ ಚಿತ್ರ 
ದೇಶ

ಗಡಿಯಲ್ಲಿ ನುಸುಳುವಿಕೆ ಹೆಚ್ಚಳ: ಈ ವರ್ಷದ ಜುಲೈವರೆಗೆ ಓರ್ವ ಪಾಕ್ ನುಸುಳುಕೋರನ ಹತ್ಯೆ, 24 ಮಂದಿ ಬಂಧನ-BSF

ಬಂಧಿತ 24 ನುಸುಳುಕೋರರ ಪೈಕಿ 12 ಮಂದಿಯನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಉಳಿದ 12 ಮಂದಿಯನ್ನು ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಬಿಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಈ ವರ್ಷ ಪಂಜಾಬ್ ಸೆಕ್ಟರ್ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನಗಳು ಹೆಚ್ಚಾಗಿದ್ದು, ಜುಲೈ 31 ರವರೆಗೂ ಓರ್ವ ಪಾಕ್ ನುಸುಳುಕೋರನನ್ನು ಹತ್ಯೆಗೈಯಲಾಗಿದ್ದು, 24 ಜನರನ್ನು ಬಂಧಿಸಲಾಗಿದೆ ಎಂದು ಬಿಎಸ್ ಎಫ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬಂಧಿತ 24 ನುಸುಳುಕೋರರ ಪೈಕಿ 12 ಮಂದಿಯನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಉಳಿದ 12 ಮಂದಿಯನ್ನು ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಬಿಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 2 ರಂದು, ಜಮ್ಮುವಿನ ಮಂಗುಚೆಕ್ ಪ್ರದೇಶದ ಖೋರಾ ಪೋಸ್ಟ್ ಬಳಿ 45 ವರ್ಷದ ವ್ಯಕ್ತಿಯೊಬ್ಬ ಪಾಕಿಸ್ತಾನದ ತುಗ್ಲಿಯಾಲ್‌ಪುರ ಪೋಸ್ಟ್‌ನಿಂದ ಭಾರತದ ಕಡೆಗೆ ನುಸುಳಿದ ನಂತರ ಆತನನ್ನು ಹತ್ಯೆ ಮಾಡಲಾಗಿತ್ತು.

ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಕಾನೂನುಬಾಹಿರ ಕೃತ್ಯಗಳಿಗಾಗಿ ದುಷ್ಕರ್ಮಿಗಳು ಹೆಚ್ಚಾಗಿ ಬಳಸುತ್ತಿರುವ ಡ್ರೋನ್‌ಗಳು ಭದ್ರತೆಗೆ ಬೆದರಿಕೆಯಾಗಿ ಹೊರಹೊಮ್ಮಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತದಲ್ಲಿ ಪಂಜಾಬ್ ಗಡಿಯು ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಡ್ರೋನ್‌ಗಳ ಅಕ್ರಮ ಬಳಕೆಗೆ ಹಾಟ್‌ಸ್ಪಾಟ್ ಆಗಿದೆ. ಜುಲೈ 31ರವರೆಗೆ 134 ಡ್ರೋನ್‌ಗಳನ್ನು ಬಿಎಸ್ ಎಫ್ ಪಡೆ ಯೋಧರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಕಳ್ಳಸಾಗಣೆ ಕಾರ್ಯಾಚರಣೆಯನ್ನು ಗಮನಾರ್ಹವಾಗಿ ತಡೆಗಟ್ಟಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ನಿಯೋಜಿಸಲಾದ ಬಿಎಸ್‌ಎಫ್ ಪಡೆಗಳು ಪಾಕಿಸ್ತಾನದಿಂದ ಭಾರತಕ್ಕೆ ಕಳ್ಳಸಾಗಣೆಯಾಗುತ್ತಿದ್ದ 164 ಕಿಲೋಗ್ರಾಂಗಳಷ್ಟು ಹೆರಾಯಿನ್ ವಶಪಡಿಸಿಕೊಂಡಿದ್ದು, ಈ ವರ್ಷದ ಜುಲೈ 31 ರ ವೇಳೆಗೆ 46 ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT