ಜಗ್ಗಿ ವಾಸುದೇವ್ 
ದೇಶ

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಎಂದಿಗೂ ಮಹಾ-ಭಾರತ ಆಗುವುದಿಲ್ಲ: ಸದ್ಗುರು

ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ.

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿರುವ ಸದ್ಗುರು ಜಗ್ಗಿ ವಾಸುದೇವ್‌, ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ ಎಂದಿದ್ದಾರೆ. ಬಾಂಗ್ಲಾದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲವಾದರೆ ಇಂಡಿಯಾ ಅಥವಾ ಭಾರತವು ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ‘ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಾತ್ರಿಪಡಿಸಲು ನಾವು ಆದಷ್ಟು ಬೇಗ ಎದ್ದುನಿಂತು ಕಾರ್ಯನಿರ್ವಹಿಸದಿದ್ದರೆ ಭಾರತವು ಮಹಾ–ಭಾರತವಾಗುವುದಿಲ್ಲ. ದುರದೃಷ್ಟವಶಾತ್‌ ಬಾಂಗ್ಲಾ ನಮ್ಮ ನೆರೆಯ ರಾಷ್ಟ್ರವಾಗಿದೆ. ನಮ್ಮ ನೆಲದ ನಾಗರಿಕರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಬಾಂಗ್ಲಾದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡುವಂತೆ ಮಾಡಿತು.ಹಿಂದೂಗಳು ಹಿಂಸಾಚಾರಕ್ಕೆ ಒಳಗಾದರು. ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ಮನೆಗಳು ಮತ್ತು ವ್ಯಾಪಾರ ಮಳಿಗೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ರೀತಿಯ ದುಷ್ಕೃತ್ಯಗಳಿಂದ ನಿಜವಾಗಿ ಭಾರತೀಯ ನಾಗರಿಕತೆಗೆ ಸೇರಿದವರನ್ನು ರಕ್ಷಿಸುವುದು ಭಾರತದ ಜವಾಬ್ದಾರಿಯಾಗಿದೆ ಎಂದು ಸದ್ಗುರು ಹೇಳಿದ್ದಾರೆ.

ಪ್ರಧಾನಿ ರಾಜೀನಾಮೆ ಬಳಿಕವೂ ಮೀಸಲಾತಿ ಹೋರಾಟ ಆಂದೋಲನ ನಡೆಸುತ್ತಿರುವವರು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಕುರಿತು ಸದ್ಗುರು ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ