ಸಂಸತ್ ಭವನ 
ದೇಶ

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆಪ್ಟೆಂಬರ್ 3 ರಂದು ಮತದಾನ

ಆಗಸ್ಟ್ 14 ರಂದು ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ನವದೆಹಲಿ: ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಘೋಷಿಸಿದೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ತೆರವಾದ ಸ್ಥಾನಗಳಿಗೆ ಈಗ ಚುನಾವಣೆ ಘೋಷಿಸಲಾಗಿದೆ.

ಆಗಸ್ಟ್ 14 ರಂದು ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ಪ್ರತಿ ರಾಜ್ಯಸಭಾ ಸ್ಥಾನಕ್ಕೆ ಸೆಪ್ಟೆಂಬರ್ 3 ರಂದು ಪ್ರತ್ಯೇಕವಾಗಿ ಮತದಾನ ನಡೆಸಲಾಗುವುದು ಮತ್ತು ಅಂದೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!