ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ online desk
ದೇಶ

ಶೇಖ್ ಹಸೀನಾ ಭಾರತ ಯಾವಾಗ ತೊರೆಯುತ್ತಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ: MEA

ಹಿಂಸಾತ್ಮಕ ದಂಗೆಯ ನಂತರ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದು ಭಾರತಕ್ಕೆ ಬಂದಿದ್ದಾರೆ.

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಯಾವಾಗ ಭಾರತವನ್ನು ತೊರೆಯುತ್ತಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.

ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳ ನೇತೃತ್ವದ ಹಿಂಸಾತ್ಮಕ ದಂಗೆಯ ನಂತರ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದು ಭಾರತಕ್ಕೆ ಬಂದಿದ್ದಾರೆ. ಅವರ ಯೋಜನೆಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯ ವರದಿಗಳ ಕುರಿತು ಪ್ರತಿಕ್ರಿಯಿಸಿದ MEA ವಕ್ತಾರರು, ಭಾರತ ಅಲ್ಲಿನ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದರು.

ಭಾರತೀಯ ರಾಯಭಾರ ಕಚೇರಿಗಳು, ಅಲ್ಲಿ ಕೆಲಸ ಮಾಡುವ ಸಿಬ್ಬಂದಿ ಮತ್ತು ಆ ದೇಶದಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ ಎಂದು ಅವರು ತಿಳಿಸಿದರು.

ಆಶ್ರಯಕ್ಕಾಗಿ ಹಸೀನಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ ಮತ್ತು ಅವರ ಅಧಿಕೃತ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಇದರಿಂದಾಗಿ ಅವರು ಭಾರತದಲ್ಲಿ ತಮ್ಮ ವಾಸ್ತವ್ಯವನ್ನು ವಿಸ್ತರಿಸಲು ಮನವಿ ಮಾಡಿದ್ದಾರೆ.

ನಾಗರಿಕ ದಂಗೆಯಲ್ಲಿ ಬೆಂದುಹೋಗಿರುವ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಲು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಇಂದು ಪ್ಯಾರಿಸ್‌ನಿಂದ ಬಾಂಗ್ಲಾದೇಶಕ್ಕೆ ಮರಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT