ಅಮೃತ್‌ಲಾಲ್‌ ಮೀನಾ  
ದೇಶ

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್‌ ಮೀನಾ ಹೃದಯಾಘಾತದಿಂದ ನಿಧನ

ನಿನ್ನೆ ರಾತ್ರಿ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಉದಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್‌ ಮೀನಾ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು.

ನಿನ್ನೆ ರಾತ್ರಿ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಉದಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಮೀನಾ ಅವರು 2013ರಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಸಾಲುಂಬರ್ ಬಿಜೆಪಿ ಶಾಸಕ ಅಮೃತ್ ಲಾಲ್ ಮೀನಾ ಅವರ ನಿಧನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಗುರುವಾರ ಸಂತಾಪ ಸೂಚಿಸಿದ್ದಾರೆ. ಅವರ ನಿಧನ ಭಾರತೀಯ ಜನತಾ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಸಿಎಂ ಹೇಳಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸಾಲುಂಬರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀ ಅಮೃತ್ ಲಾಲ್ ಜಿ ಮೀನಾ ಹೃದಯಾಘಾತದಿಂದ ನಿಧನರಾದ ಸುದ್ದಿಯಿಂದ ನನಗೆ ಆಘಾತವಾಗಿದೆ. ಇದು ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ, ಈ ದುಃಖದ ಸಮಯದಲ್ಲಿ ಅವರ ಪವಿತ್ರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಭಜನ್ ಲಾಲ್ ಶರ್ಮ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!