ಸುಕೇಶ್ ಚಂದ್ರಶೇಖರ್ 
ದೇಶ

ವಯನಾಡು ಭೂಕುಸಿತ: ಪರಿಹಾರ ನಿಧಿಗೆ 15 ಕೋಟಿ ರೂ. ಸ್ವೀಕರಿಸುವಂತೆ ಕೇರಳ ಸಿಎಂಗೆ ಸುಕೇಶ್ ಚಂದ್ರಶೇಖರ್ ಪತ್ರ

ಪ್ರಸ್ತುತ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಕೇರಳದಲ್ಲಿ ಸಂಭವಿಸಿರುವ ಭೂಕುಸಿತವನ್ನು ನೋಡಿ "ತುಂಬಾ ನೋವಾಗುತ್ತಿದೆ" ಮತ್ತು ಇಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ನವದೆಹಲಿ: 200 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್, ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದ ನಂತರ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 15 ಕೋಟಿ ರೂಪಾಯಿಗಳನ್ನು ಸ್ವೀಕರಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಕೇರಳದಲ್ಲಿ ಸಂಭವಿಸಿರುವ ಭೂಕುಸಿತವನ್ನು ನೋಡಿ "ತುಂಬಾ ನೋವಾಗುತ್ತಿದೆ" ಮತ್ತು ಇಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದು ಚಂದ್ರಶೇಖರ್ ಬರೆದಿರುವ ಪತ್ರ ಎಂದು ಅವರ ಪರ ವಕೀಲ ಅನಂತ್ ಮಲಿಕ್ ಅವರು ಖಚಿತಪಡಿಸಿದ್ದು, "ಇಂದು ನನ್ನ ಪ್ರತಿಷ್ಠಾನದಿಂದ ಪರಿಹಾರ ನಿಧಿಗೆ 15 ಕೋಟಿ ರೂಪಾಯಿ ದೇಣಿಗೆ ಸ್ವೀಕರಿಸಲು ನಾನು ಈ ಮೂಲಕ ವಿನಂತಿಸುತ್ತಿದ್ದೇನೆ. ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯ ಮೂಲಕ ಹಣ ನೀಡುತ್ತೇನೆ. ಈ ಕೊಡುಗೆಯನ್ನು ಹೊರತುಪಡಿಸಿ, ನಾನು ಸಂತ್ರಸ್ತರಿಗೆ ತಕ್ಷಣವೇ 300 ಮನೆಗಳನ್ನು ನಿರ್ಮಿಸಲು ಹೆಚ್ಚಿನ ಕೊಡುಗೆ ನೀಡಲು ಸಿದ್ಧ" ಎಂದು ಪತ್ರದಲ್ಲಿ ತಿಳಿಸಲಾಗಿದೆ.

"ಕಾನೂನುಬದ್ಧ ವ್ಯವಹಾರ ಖಾತೆಗಳಿಂದ" ಈ ಹಣವನ್ನು ನೀಡುವುದಾಗಿ ತಿಳಿಸಿರುವ ಸುಕೇಶ್ ಚಂದ್ರಶೇಖರ್, ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ಸ್ವೀಕರಿಸಬೇಕು ಮತ್ತು ಭೂಕುಸಿತ ದುರಂತಲ್ಲಿ ಸಂತ್ರಸ್ತರ ಕಲ್ಯಾಣ ಮತ್ತು ಪುನರ್ವಸತಿಗಾಗಿ ಈ ಹಣವನ್ನು ಬಳಸಿಕೊಳ್ಳುವಂತೆ ವಿನಂತಿ ಮಾಡಿದ್ದಾರೆ.

ಸುಕೇಶ್ ಚಂದ್ರಶೇಖರ್ ಅವರ ಈ ಪತ್ರಕ್ಕೆ ಕೇರಳ ಸರ್ಕಾರ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ