ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡಿನ 35 ಮೀನುಗಾರರ ಬಂಧನ, 4 ದೋಣಿ ವಶಕ್ಕೆ ಪಡೆದ ಶ್ರೀಲಂಕಾ ನೌಕಾಪಡೆ

ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಂಬನ್ ಮೀನುಗಾರರು ಮೀನುಗಾರಿಕೆಗೆ ಬಳಸುತ್ತಿದ್ದ ನಾಲ್ಕು ದೇಶಿಯ ದೋಣಿ ವಶಕ್ಕೆ ಪಡೆದ ಲಂಕಾ ನೌಕಪಡೆ.

ರಾಮನಾಥಪುರಂ: ಶ್ರೀಲಂಕಾದ ಸಮುದ್ರದಲ್ಲಿ ಬೇಟೆಯಾಡಿದ ಆರೋಪದ ಮೇಲೆ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಸುಮಾರು 35 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಂಬನ್ ಮೀನುಗಾರರು ಮೀನುಗಾರಿಕೆಗೆ ಬಳಸುತ್ತಿದ್ದ ನಾಲ್ಕು ದೇಶಿಯ ದೋಣಿಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದಿದೆ ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಲಂಕಾದ ವಾಯವ್ಯ ಸಮುದ್ರದ ಮನ್ನಾರ್‌ ದಕ್ಷಿಣದಲ್ಲಿ ಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರನ್ನು ಬಂಧಿಸಿದ್ದು, ನಂತರ ಕಲ್ಪಿಟಿಯ ಮೀನುಗಾರಿಕಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಈ ಹಿಂದೆ ಬಂಧಿತರಾಗಿದ್ದ 13 ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಈ ಬಂಧನ ನಡೆದಿದೆ. ಬಂಧನವನ್ನು ಖಂಡಿಸಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಪದೇ ಪದೇ ಮೀನುಗಾರರ ಬಂಧನಕ್ಕೆ ಶಾಶ್ವತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಈ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರದ ಡಿಎಂಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೀನುಗಾರರು ಬಿಡುಗಡೆ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವುದಾಗಿ ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪಳನಿಸ್ವಾಮಿ, ಮೀನುಗಾರರು ಪದೇ ಪದೇ ಎದುರಿಸುತ್ತಿರುವ ಸಂಕಷ್ಟಗಳಿಗೆ ಮಾತುಕತೆ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?