ಪೂಜಾ ಖೇಡ್ಕರ್ 
ದೇಶ

ಪುಣೆ: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪೂಜಾ ಖೇಡ್ಕರ್ ತಂದೆ ವಿರುದ್ಧ ಎಫ್ಐಆರ್ ದಾಖಲು

ಪುಣೆ ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಶ್ರೇಣಿಯ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಬಂಡ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪುಣೆ: ಪುಣೆ ಜಿಲ್ಲೆಯಲ್ಲಿ ಕರ್ತವ್ಯದಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪುಣೆ ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಶ್ರೇಣಿಯ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಬಂಡ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೂಜಾ ಖೇಡ್ಕರ್ ಅವರು ಸಹಾಯಕ ಕಲೆಕ್ಟರ್ ಆಗಿ ನೇಮಕಗೊಂಡ ಸಂದರ್ಭದಲ್ಲಿ, ದಿಲೀಪ್ ಖೇಡ್ಕರ್ ಅವರು ತಹಸೀಲ್ದಾರ್ ದೀಪಕ್ ಅಕಾಡೆ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆದರೆ ಆಡಳಿತಾತ್ಮಕ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕಿಲ್ಲದಿದ್ದರೂ ಸಹ ತಮ್ಮ ಮಗಳಿಗೆ ಕ್ಯಾಬಿನ್ ನೀಡುವಂತೆ ಕೇಳಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಇತ್ತೀಚೆಗೆ ಪೂಜಾ ಖೇಡ್ಕರ್ ಅವರ ಆಯ್ಕೆಯನ್ನು ರದ್ದುಗೊಳಿಸಿದೆ ಮತ್ತು ಭವಿಷ್ಯದ ಎಲ್ಲಾ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಅವರನ್ನು ಶಾಶ್ವತವಾಗಿ ಡಿಬಾರ್ ಮಾಡಿದೆ.

2022 ರ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಗೆ ಸಲ್ಲಿಸಿದ ಅರ್ಜಿಯಲ್ಲಿ 'ತಪ್ಪು ಮಾಹಿತಿ ನೀಡಿದ' ಆರೋಪದ ಮೇಲೆ ದೆಹಲಿಯಲ್ಲಿ ಆಕೆಯ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಅವರು ತಲೆಮರೆಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!