ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ಕ್ಯಾಂಪಸ್‌ನೊಳಗೆ 'ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್' ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ.
ನವದೆಹಲಿ: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಕಾಲೇಜುಗಳಲ್ಲಿ ಹಿಜಾಬ್, ಬುರ್ಖಾ ನಿಷೇಧಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಮುಂಬೈ ಎಜುಕೇಶನಲ್ ಸೊಸೈಟಿಯಿಂದ ಪ್ರತಿಕ್ರಿಯೆ ಕೇಳಿದೆ.
ಕ್ಯಾಂಪಸ್‌ನೊಳಗೆ 'ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್' ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ.
'ಬುರ್ಖಾ, ಹಿಜಾಬ್' ಕುರಿತ ತನ್ನ ಮಧ್ಯಂತರ ಆದೇಶವನ್ನು ದುರ್ಬಳಕೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ದುರ್ಬಳಕೆಯ ಸಂದರ್ಭದಲ್ಲಿ ನ್ಯಾಯಾಲಯ ಸಂಪರ್ಕಿಸಲು ಮುಂಬೈ ಕಾಲೇಜಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ.
ತರಗತಿಯೊಳಗೆ ವಿದ್ಯಾರ್ಥಿನಿಯರು ಯಾವುದೇ ಬುರ್ಖಾ ಧರಿಸಲು ಮತ್ತು ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆ ಅನುಮತಿ ಇಲ್ಲ ಎಂದು ಉನ್ನತ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.
"ದೇಶದಲ್ಲಿ ಅನೇಕ ಧರ್ಮಗಳಿವೆ ಎಂದು ತಿಳಿಯಲು ಎಚ್ಚರಗೊಳ್ಳುತ್ತೀರಿ" ಎಂದು ಕ್ಯಾಂಪಸ್‌ನಲ್ಲಿ ಹಿಜಾಬ್, ನಕಾಬ್ ನಿಷೇಧಿಸುವ ಸುತ್ತೋಲೆ ಕುರಿತು ಮುಂಬೈ ಕಾಲೇಜಿಗೆ ಸುಪ್ರೀಂಕೋರ್ಟ್ ಹೇಳಿತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.