ನಿತಿನ್ ಗಡ್ಕರಿ 
ದೇಶ

ಕಾನೂನು ಸುವ್ಯವಸ್ಥೆ ಸುಧಾರಿಸದಿದ್ದರೆ ಹೆದ್ದಾರಿ ಯೋಜನೆಗಳು ಸ್ಥಗಿತ: ಪಂಜಾಬ್ ಸರ್ಕಾರಕ್ಕೆ ಗಡ್ಕರಿ ಎಚ್ಚರಿಕೆ

ಈ ಸಂಬಂಧ ಗಡ್ಕರಿ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಪತ್ರ ಬರೆದಿದ್ದು, ದೆಹಲಿ-ಕತ್ರಾ ಎಕ್ಸ್‌ಪ್ರೆಸ್‌ವೇ ಯೋಜನೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಎರಡು ಘಟನೆಗಳ ಉಲ್ಲೇಖಿಸಿದ್ದಾರೆ.

ನವದೆಹಲಿ: ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸದಿದ್ದಲ್ಲಿ ಪಂಜಾಬ್‌ನಲ್ಲಿ 14,288 ಕೋಟಿ ರೂಪಾಯಿ ವೆಚ್ಚದ ಒಟ್ಟು 293 ಕಿ.ಮೀ ಉದ್ದದ ಎಂಟು ತೀವ್ರ ಬಾಧಿತ ಹೆದ್ದಾರಿ ಯೋಜನೆಗಳನ್ನು ರದ್ದುಗೊಳಿಸಲಾಗುವುದು ಅಥವಾ ಸ್ಥಗಿತಗೊಳಿಸಲಾಗುವುದು ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಪಂಜಾಬ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಗಡ್ಕರಿ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಪತ್ರ ಬರೆದಿದ್ದು, ದೆಹಲಿ-ಕತ್ರಾ ಎಕ್ಸ್‌ಪ್ರೆಸ್‌ವೇ ಯೋಜನೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಎರಡು ಘಟನೆಗಳ ಉಲ್ಲೇಖಿಸಿದ್ದಾರೆ.

"ಜಲಂಧರ್ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಗುತ್ತಿಗೆದಾರರ ಇಂಜಿನಿಯರ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದರೂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ" ಎಂದು ಗಡ್ಕರಿ ಅವರು ಆಗಸ್ಟ್ 9ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿ-ಕತ್ರಾ ಎಕ್ಸ್‌ಪ್ರೆಸ್‌ವೇಯ ಗುತ್ತಿಗೆದಾರರ ಯೋಜನಾ ಶಿಬಿರದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ ಮತ್ತು ಯೋಜನಾ ಶಿಬಿರವನ್ನು ಮತ್ತು ಅವರ ಸಿಬ್ಬಂದಿಯನ್ನು ಜೀವಂತವಾಗಿ ಸುಡುವುದಾಗಿ ಎಂಜಿನಿಯರ್‌ಗಳಿಗೆ ಬೆದರಿಕೆ ಹಾಕಿದ ಲೂಧಿಯಾನ ಜಿಲ್ಲೆಯ ಮತ್ತೊಂದು ಘಟನೆಯನ್ನು ಕೇಂದ್ರ ಸಚಿವರು ಉಲ್ಲೇಖಿಸಿದ್ದಾರೆ.

ಆದರೆ, ಈ ಸಂಬಂಧ ಎನ್‌ಎಚ್‌ಎಐ ಅಧಿಕಾರಿಗಳು ಲಿಖಿತ ಮನವಿ ಮಾಡಿದರೂ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಮತ್ತು ದುಷ್ಕರ್ಮಿಗಳನ್ನು ಬಂಧಿಸಿಲ್ಲ ಎಂದು ಅವರು ಹೇಳಿದ್ದಾರೆ.

"ಪರಿಸ್ಥಿತಿ ಸುಧಾರಿಸದಿದ್ದರೆ, 14,288 ಕೋಟಿ ರೂಪಾಯಿ ವೆಚ್ಚದ ಒಟ್ಟು 293 ಕಿಮೀ ಉದ್ದದ ತೀವ್ರ ಪೀಡಿತ 8 ಯೋಜನೆಗಳನ್ನು ರದ್ದುಗೊಳಿಸುವುದು/ಸ್ಥಗಿತಗೊಳಿಸುವುದನ್ನು ಬಿಟ್ಟು NHAI ಗೆ ಬೇರೆ ದಾರಿ ಇಲ್ಲ. ಇದರಿಂದ ಇಡೀ ಕಾರಿಡಾರ್ ನಿಷ್ಪ್ರಯೋಜಕವಾಗಲಿದೆ" ಎಂದು ಗಡ್ಕರಿ ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್