ಅನಂತ್ ನಾಗ್: ಕೇಂದ್ರಾಡಳಿತ ಪ್ರದೇಶ ಜಮ್ಮುಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಅಹ್ಲಾನ್ ಗಗರ್ಮಂಡು ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಶ್ಮೀರ ವಲಯ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಅನಂತ್‌ನಾಗ್ ಜಿಲ್ಲೆಯ ಅಹ್ಲಾನ್ ಗಗರ್ಮಂಡು ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದಕ್ಕೂ ಮುನ್ನಾ ಕಥುವಾ ಜಿಲ್ಲೆಯ ಮಲ್ಹಾರ್, ಬಾನಿ ಮತ್ತು ಸಿಯೋಜಧರ್‌ನ ಧೋಕ್ಸ್‌ನಲ್ಲಿ ಕೊನೆಯದಾಗಿ ಕಾಣಿಸಿಕೊಂಡ ನಾಲ್ವರು ಉಗ್ರರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪೊಲೀಸರು, ಅವರ ಬಗ್ಗೆ ಮಾಹಿತಿ ನೀಡಿದ್ದವರಿಗೆ ರೂ.5 ಲಕ್ಷ ಬಹುಮಾನವನ್ನು ಘೋಷಿಸಿದ್ದರು.
ಕಥುವಾದಲ್ಲಿ ಇತ್ತೀಚಿಗೆ ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ ಮತ್ತು ಜಮ್ಮು ಪ್ರದೇಶದ ದೋಡಾ ಮತ್ತು ಉಧಮ್‌ಪುರದಲ್ಲಿ ಎನ್‌ಕೌಂಟರ್ ನಡೆದಿತ್ತು. ಇದಾದ ನಂತರ ಉಗ್ರರ ಹೆಡೆಮುರಿ ಕಟ್ಟಲು ಮುಂದಾಗಿರುವ ಪೊಲೀಸರು, ಉಗ್ರರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ.