ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ online desk
ದೇಶ

ಕಾಂಗ್ರೆಸ್ ನ ಎಲ್ಲಾ 99 ಸಂಸದರಿಗೆ ಅನರ್ಹತೆ ಭೀತಿ!?

ಪಿಐಎಲ್ ನಲ್ಲಿ ಚುನಾವಣಾ ಆಯೋಗದ ವಿರುದ್ಧವೂ ನಿರ್ದೇಶನಕ್ಕೆ ಮನವಿ ಮಾಡಲಾಗಿದ್ದು, ಕಾಂಗ್ರೆಸ್ ನ ಗ್ಯಾರೆಂಟಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಯೋಗದ ವಿರುದ್ಧ ಆರೋಪಿಸಲಾಗಿದೆ.

ಪ್ರಯಾಗ್ ರಾಜ್: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಘರ್ ಘರ್ ಗ್ಯಾರೆಂಟಿ ಭರವಸೆಗಳು ಕಾನೂನಿನ ಪ್ರಕಾರ ಲಂಚದ ಆಮಿಷವಾಗಿದ್ದು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ 99 ಸಂಸದರನ್ನು ಅನರ್ಹಗೊಳಿಸಬೇಕೆಂದು ಅಲ್ಲಹಾಬಾದ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.

ಪಿಐಎಲ್ ನಲ್ಲಿ ಚುನಾವಣಾ ಆಯೋಗದ ವಿರುದ್ಧವೂ ನಿರ್ದೇಶನಕ್ಕೆ ಮನವಿ ಮಾಡಲಾಗಿದ್ದು, ಕಾಂಗ್ರೆಸ್ ನ ಗ್ಯಾರೆಂಟಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಯೋಗದ ವಿರುದ್ಧ ಆರೋಪಿಸಲಾಗಿದೆ.

ಈ ವರ್ಷ ಮೇ.೦2 ರಂದು ಆಯೋಗ, ಈ ರೀತಿಯ ಭರವಸೆಗಳನ್ನು ನೀಡುವುದರ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿತ್ತಾದರೂ, ಕಾಂಗ್ರೆಸ್ ಪಕ್ಷ ನಿಯಮಗಳನ್ನು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆಯನ್ನು ರಾಜಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಗ್ಯಾರೆಂಟಿ ಕಾರ್ಡ್ ಗಳ ವಿತರಣೆಯಲ್ಲಿ ತೊಡಗಿತ್ತು ಎಂದು ಪಿಐಎಲ್ ಆರೋಪಿಸಿದೆ.

ಪಿಐಎಲ್ ಪ್ರಕಾರ, 'ಘರ್ ಘರ್ ಖಾತರಿ ಯೋಜನೆ'ಯು ಮತಗಳಿಗಾಗಿ ವಿವಿಧ ಆರ್ಥಿಕ ಮತ್ತು ವಸ್ತು ಪ್ರಯೋಜನಗಳನ್ನು ಭರವಸೆ ನೀಡುವ ಗ್ಯಾರಂಟಿ ಕಾರ್ಡ್‌ಗಳ ವಿತರಣೆಯನ್ನು ಒಳಗೊಂಡಿತ್ತು. ಈ ರೀತಿಯ ಭರವಸೆ 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 (1) (A) ಅಡಿಯಲ್ಲಿ ಲಂಚಕ್ಕೆ ಸಮಾನವಾಗಿದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171B ಮತ್ತು 171E ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಪಿಐಎಲ್ ಸಲ್ಲಿಸಿರುವವರು ವಾದಿಸಿದ್ದಾರೆ.

ಹಾಗಾಗಿ ಈ ವರ್ಷದ ಚುನಾವಣೆಯಲ್ಲಿ ಚುನಾಯಿತರಾದ ಎಲ್ಲಾ 99 ಕಾಂಗ್ರೆಸ್ ಸಂಸದರನ್ನು ಅಸ್ತಿತ್ವದಲ್ಲಿರುವ ಕಾನೂನಿನ ಪ್ರಕಾರ ಅನರ್ಹರೆಂದು ಘೋಷಿಸಬೇಕು ಎಂದು ಪಿಐಎಲ್ ಮನವಿ ಮಾಡಿದೆ. ಘರ್ ಘರ್ ಗ್ಯಾರಂಟಿ ಯೋಜನೆಯಿಂದ ಸಂಸದರು ಲಾಭ ಪಡೆದಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಅರ್ಜಿದಾರರು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT