ಚೂರಲ್​​​ಮಲದಲ್ಲಿ ಪ್ರಧಾನಿ ಮೋದಿ 
ದೇಶ

ವಯನಾಡಿನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ; ಚೂರಲ್​​​ಮಲಗೆ ಭೇಟಿ

ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದು, ಮುಂಡಕೈ-ಚೂರಲ್‌ಮಲಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಯನಾಡು: ಭೀಕರ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದು, ಮುಂಡಕೈ-ಚೂರಲ್‌ಮಲಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ ಮೈದಾನದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿದ ಪ್ರಧಾನಿ ಮೋದಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಚೂರಲ್‌ಮಲಗೆ ತೆರಳಿದರು. ಭೂಕುಸಿತದಿಂದ ಹಾನಿಗೊಂಡ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳನ್ನು ವೀಕ್ಷಿಸಿದರು.

ಪ್ರಧಾನಿ ಮೋದಿ ಅವರು ಸೇತುವೆಯ ಮೇಲೆ ನಡೆದ ಹೋಗಿ, ಹಾನಿಯ ಸಮೀಕ್ಷೆ ನಡೆಸಿದರು. ಚೂರಲ್‌ಮಲ ತಲುಪಿದ ನಂತರ ತಮ್ಮ ವಾಹನದಿಂದ ಇಳಿದು, ರಕ್ಷಣಾ ಸಿಬ್ಬಂದಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿ ವೇಣು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಬಂಡೆಗಳು ಮತ್ತು ಅವಶೇಷಗಳಿಂದ ಆವೃತವಾದ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಸಮೀಕ್ಷೆ ಮಾಡಿದರು.

ಪ್ರಧಾನಿಯವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಸಹ ಇದ್ದರು.

ಇದಾದ ಬಳಿಕ ದುರಂತದಲ್ಲಿ ಬದುಕುಳಿದ ಮತ್ತು ಚಿಕಿತ್ಸೆ ಪಡೆಯುತ್ತಿರುವವರನ್ನೂ ಪ್ರಧಾನಿ ಮೋದಿ ಭೇಟಿ ಮಾಡಲಿದರು. ಮೇಪ್ಪಾಡಿ ಆಸ್ಪತ್ರೆಯಲ್ಲಿರುವ ಅರುಣ್, ಅನಿಲ್, ಎಂಟು ವರ್ಷದ ಆವಂತಿಕಾ ಮತ್ತು ಒಡಿಶಾದ ಸುಹೃತಿ ಅವರನ್ನು ಮೋದಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಭೂಕುಸಿತ ಪೀಡಿತ ಗ್ರಾಮಗಳಲ್ಲಿ ಪ್ರಧಾನಿ ಮೋದಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ವೈಮಾನಿಕ ಸಮೀಕ್ಷೆ

ವಿಪತ್ತು ಪೀಡಿತ ಪ್ರದೇಶದಲ್ಲಿ ಪುನರ್ವಸತಿ ಮತ್ತು ಪರಿಹಾರ ಕಾರ್ಯಗಳಿಗಾಗಿ ಕೇರಳ ಸರ್ಕಾರವು ಕೇಂದ್ರದಿಂದ 2,000 ಕೋಟಿ ರೂಪಾಯಿ ನೆರವನ್ನು ಕೋರಿದೆ. ಜುಲೈ 30 ರಂದು ಈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ 500 ಜನರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT