ಭೂಕುಸಿತ ನಂತರದ ದೃಶ್ಯ  
ದೇಶ

ಪರಿಹಾರ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆ: ಇಂದು ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ

ಮಧ್ಯಾಹ್ನ 12:15 ರ ಸುಮಾರಿಗೆ, ವಿಪತ್ತಿಗೆ ಆಹುತಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ಥಳಾಂತರ ಕಾರ್ಯಾಚರಣೆಗಳ ಕುರಿತು ರಕ್ಷಣಾ ತಂಡಗಳಿಂದ ಮಾಹಿತಿ ಪಡೆಯಲಿದ್ದಾರೆ.

ವಯನಾಡ್/ನವದೆಹಲಿ: ಮಾರಣಾಂತಿಕ ಭೂಕುಸಿತ ಉಂಟಾಗಿ ಅಪಾರ ಸಾವು-ನೋವು ಕಂಡ ಕೇರಳ ರಾಜ್ಯದ ವಯನಾಡ್ ಗೆ ಇಂದು ಶನಿವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಭೂಕುಸಿತದ ನಂತರ ನಡೆಯುತ್ತಿರುವ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಕಣ್ಣೂರಿಗೆ ಆಗಮಿಸಲಿದ್ದು, ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ.

ಮಧ್ಯಾಹ್ನ 12:15 ರ ಸುಮಾರಿಗೆ, ವಿಪತ್ತಿಗೆ ಆಹುತಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ಥಳಾಂತರ ಕಾರ್ಯಾಚರಣೆಗಳ ಕುರಿತು ರಕ್ಷಣಾ ತಂಡಗಳಿಂದ ಮಾಹಿತಿ ಪಡೆಯಲಿದ್ದಾರೆ. ಸಂಕಷ್ಟ ಪೀಡಿತರಿಗೆ ಸರ್ಕಾರದಿಂದ ಬೆಂಬಲ ನೀಡಲು ಪುನರ್ವಸತಿ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡುವ ನಿರೀಕ್ಷೆಯಿದೆ.

ಸ್ಥಳಗಳ ಭೇಟಿಗಳ ಜೊತೆಗೆ, ಪ್ರಧಾನ ಮಂತ್ರಿ ಅವರು ಪರಿಹಾರ ಶಿಬಿರ ಮತ್ತು ಸ್ಥಳೀಯ ಆಸ್ಪತ್ರೆಗಳಿಗೆ ಸಹ ಭೇಟಿ ಕೊಡಲಿದ್ದಾರೆ. ಅಲ್ಲಿ ಅವರು ಭೂಕುಸಿತದ ಸಂತ್ರಸ್ತರು ಮತ್ತು ಬದುಕುಳಿದವರನ್ನು ಭೇಟಿ ಮಾಡಿ ಅವರು ಸಂಕಷ್ಟಗಳನ್ನು ಆಲಿಸಲಿದ್ದಾರೆ.

ನಂತರ ಸಮಗ್ರ ಪರಿಹಾರ ಪ್ರಯತ್ನಗಳನ್ನು ಕೈಗೊಳ್ಳುವ ಬಗ್ಗೆ ಪ್ರಧಾನಿಯವರು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT