ನಟ್ವರ್ ಸಿಂಗ್ 
ದೇಶ

ಮಾಜಿ ವಿದೇಶಾಂಗ ಸಚಿವ ನಟ್ವರ್ ಸಿಂಗ್ ವಿಧಿವಶ: ಗಣ್ಯರ ಸಂತಾಪ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ದೆಹಲಿ ಬಳಿಯ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ದಾಖಲಾಗಿದ್ದ ಅವರು ಕೊನೆಯುಸಿರೆಳೆದಿದ್ದಾರೆ.

ನಟ್ವರ್ ಸಿಂಗ್ ಅವರ ಮಗ ಆಸ್ಪತ್ರೆಯಲ್ಲಿದ್ದಾರೆ. ಅವರ ಅನೇಕ ಕುಟುಂಬ ಸದಸ್ಯರು ದೆಹಲಿಯಲ್ಲಿ ಅಂತಿಮ ವಿಧಿವಿಧಾನಗಳಿಗಾಗಿ ದೆಹಲಿಗೆ ಬರುತ್ತಿದ್ದಾರೆ. ಸ್ವಲ್ಪ ಸಮಯದಿಂದ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

1931ರಲ್ಲಿ ಸಿಂಗ್ ಅವರು ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಜನಿಸಿದ್ದರು. ಅವರು ವೃತ್ತಿ ರಾಜತಾಂತ್ರಿಕರಾಗಿ ಕಾರ್ಯನಿರ್ವಹಿಸಿದ್ದರು. ನಟ್ವರ್ ಸಿಂಗ್ ವಿದೇಶಿ ವ್ಯವಹಾರಗಳ ಸೂಕ್ಷ್ಮ ವಿಷಯಗಳ ಬಗ್ಗೆ ಬರೆಯುತ್ತಿದ್ದ ಲೇಖನಗಳಿಂದಲೂ ಜನಪ್ರಿಯತೆ ಗಳಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದ ಅವಧಿಯಲ್ಲಿ ಅವರು ಅನೇಕ ಗೌರವಗಳಿಗೆ ಪಾತ್ರರಾಗಿದ್ದರು. ಅವರ ಸೇವೆಗಾಗಿ 1984ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.

ಅನುಭವಿ ರಾಜಕಾರಣಿ, ಕೆ.ನಟ್ವರ್ ಸಿಂಗ್ ಅವರು ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-1 ಸರ್ಕಾರದ 2004-05ರ ಅವಧಿಯಲ್ಲಿ ಭಾರತದ ವಿದೇಶಾಂಗ ಸಚಿವರಾಗಿದ್ದರು. 1966ರಿಂದ 1971ರವರೆಗೆ ಪ್ರಧಾನಿ ಇಂದಿರಾ ಗಾಂಧಿಯವರ ಅವಧಿಯಲ್ಲಿ ಸಿಂಗ್ ಪಾಕಿಸ್ತಾನಕ್ಕೆ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.

ನಟ್ವರ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ನಟ್ವರ್ ಸಿಂಗ್ ಅವರ ನಿಧನದಿಂದ ಬಹಳ ನೋವಾಗಿದೆ. ಅವರು ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿಯ ಬಹಳ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಬುದ್ಧಿವಂತಿಕೆ ಮತ್ತು ಸಮೃದ್ಧ ಬರವಣಿಗೆಗೆ ಹೆಸರುವಾಸಿಯಾಗಿದ್ದರು ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವ ನಟ್ವರ್ ಸಿಂಗ್​ ಅವರ ನಿಧನದ ಸುದ್ದಿ ದುಃಖಕರವಾಗಿದೆ. ದೇವರು ಅವರ ಕುಟುಂಬಕ್ಕೆ ಈ ನಷ್ಟವನ್ನು ಭರಿಸುವ ಶಕ್ತಿ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಎಂದು ಕಾಂಗ್ರೆಸ್​ ನಾಯಕ ರಣದೀಪ್ ಸುರ್ಜೆವಾಲಾ ಎಕ್ಸ್‌ ಪೋಸ್ಟ್‌ನಲ್ಲಿ ಮಾಜಿ ವಿದೇಶಾಂಗ ಸಚಿವರಿಗೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT