ತರಬೇತಿ ವಿಮಾನ ಪತನ 
ದೇಶ

ಮಧ್ಯ ಪ್ರದೇಶ: ತರಬೇತಿ ವಿಮಾನ ಪತನ; ಇಬ್ಬರು ಪೈಲಟ್‌ಗಳಿಗೆ ಗಾಯ!

ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ

ಗುನಾ: ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನವೊಂದು ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಕೂದಲೆಳೆ ಅಂತರದಲ್ಲಿ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮಧ್ಯ ಪ್ರದೇಶದ ಗುನಾದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಖಾಸಗಿ ವಿಮಾನಯಾನ ಅಕಾಡೆಮಿಯ ತರಬೇತಿ ವಿಮಾನವು ಏರ್‌ಸ್ಟ್ರಿಪ್‌ನಲ್ಲೇ ಪತನಗೊಂಡಿದೆ.

ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಖಾಸಗಿ ವಿಮಾನಯಾನ ಅಕಾಡೆಮಿಯ ಎರಡು ಆಸನಗಳ ಸೆಸ್ನಾ 152 ವಿಮಾನವು ಮಧ್ಯಾಹ್ನ 1.30 ರ ಸುಮಾರಿಗೆ ಪತನಗೊಂಡಿದೆ ಎಂದು ಗುನಾ ಕ್ಯಾಂಟ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ರಜೋರಿಯಾ ತಿಳಿಸಿದ್ದಾರೆ. ಇಂಜಿನ್ ವೈಫಲ್ಯದಿಂದ ವಿಮಾನ ಪತನಗೊಂಡಿರುವ ಶಂಕೆ ವ್ಯಕ್ತವಾಗಿದ್ದು. ಅಪಘಾತಕ್ಕೂ ಮುನ್ನ ಅವರು ಸುಮಾರು 40 ನಿಮಿಷಗಳ ಕಾಲ ಹಾರಾಟ ನಡೆಸಿದ್ದರು ಎಂದು ಅವರು ತಿಳಿಸಿದ್ದಾರೆ.

ಪತನದ ಬಳಿಕ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಇಬ್ಬರೂ ಪೈಲಟ್‌ಗಳನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕೆಲವು ದಿನಗಳ ಹಿಂದೆ ಇಲ್ಲಿಗೆ ತರಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT