ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಖಾಸಗಿ ವಿಶ್ವವಿದ್ಯಾಲಯದ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುತ್ತಣಿ ಬಳಿ ಇಂದು ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಐವರು ವಿದ್ಯಾರ್ಥಿಗಳು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ.
ವಿದ್ಯಾರ್ಥಿಗಳು ಖಾಸಗಿ ವಿಶ್ವವಿದ್ಯಾನಿಲಯಕ್ಕೆ ಸೇರಿದವರು ಎಂದು ಕೆಕೆ ಛತ್ರಂ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪೊಲೀಸರ ಪ್ರಕಾರ, ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.