ಸಚಿವೆ ಅತಿಶಿ 
ದೇಶ

ಸ್ವಾತಂತ್ರ್ಯೋತ್ಸವ: ದೆಹಲಿ ಸಿಎಂ ಕೇಜ್ರಿವಾಲ್ ಬದಲಿಗೆ ಸಚಿವೆ ಅತಿಶಿಯಿಂದ ಧ್ವಜಾರೋಹಣ

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ನಂತರ ಗೋಪಾಲ್ ರೈ ಅವರು, ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಸಾಮಾನ್ಯ ಆಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ನವದೆಹಲಿ: ಸ್ವಾತಂತ್ರ್ಯೋತ್ಸವ ದಿನದಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬದಲಾಗಿ ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ ಎಂದು ದೆಹಲಿ ಸಚಿವ ಗೋಪಾಲ್ ರೈ ಅವರು ಸೋಮವಾರ ಹೇಳಿದ್ದಾರೆ. ಇದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಹೊಸ ಸಂಘರ್ಷಕ್ಕೆ ದಾರಿಮಾಡಿಕೊಡಬಹುದು.

ಇಂದು ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ನಂತರ ಗೋಪಾಲ್ ರೈ ಅವರು, ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಸಾಮಾನ್ಯ ಆಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಸಾಮಾನ್ಯ ಆಡಳಿತ ಸಚಿವರೂ ಆಗಿರುವ ರೈ, "ನಾನು ಇಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದೇನೆ. 2024 ರ ಆಗಸ್ಟ್ 15 ರಂದು ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಸಚಿವೆ ಅತಿಶಿ ಅವರು ಧ್ವಜಾರೋಹಣ ಮಾಡಬೇಕು ಎಂದು ಅವರು ಬಯಸಿದ್ದಾರೆ. ಅದಕ್ಕೆ ಅನುಗುಣವಾಗಿ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.

ಈ ಸಂಬಂಧ ಕಳೆದ ವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಬರೆದ ಪತ್ರದಲ್ಲಿ, ಕೇಜ್ರಿವಾಲ್ ಅವರು ತಮ್ಮ ಸ್ಥಾನದಲ್ಲಿ ದೆಹಲಿ ಸರ್ಕಾರದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡುತ್ತಾರೆ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಆದರೆ, ಮುಖ್ಯಮಂತ್ರಿಯಿಂದ ಯಾವುದೇ ಪತ್ರವನ್ನು ಸ್ವೀಕರಿಸಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಸ್ಪಷ್ಟನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT