ಕೆ ಕವಿತಾ 
ದೇಶ

Delhi Excise Policy Case: ಕೆ ಕವಿತಾ ಜಾಮೀನು ಅರ್ಜಿ ವಿಚಾರವಾಗಿ CBI, EDಗೆ ಸುಪ್ರೀಂ ಕೋರ್ಟ್ ನೋಟಿಸ್!

ಜುಲೈ 1 ರಂದು ದೆಹಲಿ ಹೈಕೋರ್ಟ್ ಕವಿತಾ ಅವರ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಕವಿತಾ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ BRS ನಾಯಕಿ ಕೆ ಕವಿತಾ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ.

ಜುಲೈ 1 ರಂದು ದೆಹಲಿ ಹೈಕೋರ್ಟ್ ಕವಿತಾ ಅವರ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಕವಿತಾ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಿದೆ. ಅಂತೆಯೇ ನ್ಯಾ.ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್‌ ಅವರಿದ್ದ ಪೀಠ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್‌ 20ಕ್ಕೆ ಮುಂದೂಡಿದೆ.

ಕವಿತಾ ಪರ ವಕೀಲರ ವಾದ

ಇನ್ನು ಅರ್ಜಿ ವಿಚಾರಣೆ ವೇಳೆ ಕೆ ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು, 'ಕವಿತಾ 5 ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಜಾಮೀನು ಪಡೆಯಲು ಅವರು ಅರ್ಹರು ಎಂದು ವಾದಿಸಿದರು.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ಮದ್ಯ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿತಾ ಅವರನ್ನು ಬಂಧಿಸಲಾಗಿದೆ. ಕವಿತಾ ಅವರನ್ನು ಮಾರ್ಚ್‌ 15ರಂದು ಇ.ಡಿ ಬಂಧಿಸಿತ್ತು. ನ್ಯಾಯಾಂಗ ಬಂಧನದಲ್ಲಿ ಇದ್ದ ಅವಧಿಯಲ್ಲೇ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಅವರನ್ನು ಸಿಬಿಐ ಬಂಧಿಸಿದೆ.

ಇತ್ತೀಚೆಗೆ, ಜಾರಿ ನಿರ್ದೇಶನಾಲಯವು (ಇಡಿ) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರಕ ಚಾರ್ಜ್ ಶೀಟ್ ಸಲ್ಲಿಸಿತ್ತು. ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳಾದ ಚನ್‌ಪ್ರೀತ್ ಸಿಂಗ್, ದಾಮೋದರ್, ಪ್ರಿನ್ಸ್ ಸಿಂಗ್ ಮತ್ತು ಅರವಿಂದ್ ಕುಮಾರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್