ಅರವಿಂದ್ ಕೇಜ್ರಿವಾಲ್ - ಕೆ ಕವಿತಾ 
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕೆ ಕವಿತಾ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2 ರವರೆಗೆ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

55 ವರ್ಷದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿತ್ತು. ಅಲ್ಲಿ ಅವರು ಜಾರಿ ನಿರ್ದೇಶನಾಲಯ ದಾಖಲಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!