ಕೋಲ್ಕತ್ತಾದಲ್ಲಿ ಕಿರಿಯ ವೈದ್ಯರು, ತರಬೇತಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. 
ದೇಶ

ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಕಿರಿಯ ವೈದ್ಯರ ಮುಂದುವರಿದ ಮುಷ್ಕರ; ಆಗಸ್ಟ್ 14ರೊಳಗೆ ತನಿಖೆ ಮುಗಿಸಲು ಪೊಲೀಸರಿಗೆ ಗಡುವು

ವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರು ನಾಳೆಯೊಳಗೆ ವೈದ್ಯೆ ಹತ್ಯೆಯ ನಿಖೆಯನ್ನು ಪೂರ್ಣಗೊಳಿಸಲು ಕೋಲ್ಕತ್ತಾ ಪೊಲೀಸರಿಗೆ ಗಡುವು ವಿಧಿಸಿದ್ದಾರೆ.

ಕೋಲ್ಕತ್ತಾ: ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಮತ್ತು ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಹಾಗೂ ವೈದ್ಯಕೀಯ ವೃತ್ತಿಪರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳದಾದ್ಯಂತ ಕಿರಿಯ ವೈದ್ಯರು ಮಂಗಳವಾರ ಮುಷ್ಕರ ಮುಂದುವರಿಸಿದ್ದಾರೆ.

ಇಂದು ಮುಂಜಾನೆಯಿಂದಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (OPDs) ರೋಗಿಗಳ ಉದ್ದನೆಯ ಸರತಿ ಸಾಲುಗಳು ಕಂಡುಬಂದಿದ್ದರಿಂದ, ಹಿರಿಯ ವೈದ್ಯರು ತಮ್ಮ ಕಿರಿಯ ಕೌಂಟರ್‌ಪಾರ್ಟ್ಸ್‌ಗಳನ್ನು ಬದಲಿಸಿದ್ದರಿಂದ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರಿತು.

ವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರು ನಾಳೆಯೊಳಗೆ ವೈದ್ಯೆ ಹತ್ಯೆಯ ನಿಖೆಯನ್ನು ಪೂರ್ಣಗೊಳಿಸಲು ಕೋಲ್ಕತ್ತಾ ಪೊಲೀಸರಿಗೆ ಗಡುವು ವಿಧಿಸಿದ್ದಾರೆ.

ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಮುಷ್ಕರ ಮತ್ತು ಪ್ರತಿಭಟನೆ ಮುಂದುವರಿಯುತ್ತದೆ. ನಮ್ಮ ಬೇಡಿಕೆಗಳ ಬಗ್ಗೆ ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಾವು ಒತ್ತಾಯಿಸುತ್ತಿದ್ದೇವೆ ಎಂದು ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರತಿಭಟನಾನಿರತ ಕಿರಿಯ ವೈದ್ಯರೊಬ್ಬರು ಹೇಳಿದರು.

ಅವರಿಗೆ ಭಾನುವಾರದವರೆಗೆ ಗಡುವು ಏಕೆ ಬೇಕು, ಬುಧವಾರದೊಳಗೆ ಅವರ ತನಿಖೆಯನ್ನು ಪೂರ್ಣಗೊಳಿಸಲು ನಾವು ಪೊಲೀಸರನ್ನು ಕೇಳುತ್ತಿದ್ದೇವೆ ಎಂದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಿನ್ನೆ ಸೋಮವಾರ ಮೃತರ ಪೋಷಕರನ್ನು ಭೇಟಿ ಮಾಡಿದ ನಂತರ, ಪ್ರಕರಣವನ್ನು ಪರಿಹರಿಸಲು ಕೋಲ್ಕತ್ತಾ ಪೊಲೀಸರಿಗೆ ಆಗಸ್ಟ್ 18 ರ ಗಡುವು ನೀಡಿದರು, ವಿಫಲವಾದರೆ ಅವರು ವಿಷಯವನ್ನು ಸಿಬಿಐಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆಯ ಶವ ಪತ್ತೆಯಾಗಿದ್ದು, ಅಪರಾಧಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕನನ್ನು ಶನಿವಾರ ಬಂಧಿಸಲಾಗಿದೆ. ಭಾನುವಾರದವರೆಗೆ, ಕಿರಿಯ ವೈದ್ಯರು ತುರ್ತು ಕರ್ತವ್ಯಕ್ಕೆ ಹಾಜರಾಗಿದ್ದರು, ನಿನ್ನೆ ಬೆಳಗ್ಗೆಯಿಂದ ಅವರು ಎಲ್ಲಾ ಕೆಲಸವನ್ನು ನಿಲ್ಲಿಸಿ ಮುಷ್ಕರ ಮಾಡುತ್ತಿದ್ದಾರೆ. ಹೆಚ್ಚಾಗಿ ಒಪಿಡಿಗಳಲ್ಲಿ ರೋಗಿಗಳನ್ನು ನಿಭಾಯಿಸಲು ರಾಜ್ಯ ಸರ್ಕಾರವು ಎಲ್ಲಾ ಹಿರಿಯ ವೈದ್ಯರ ರಜೆಗಳನ್ನು ರದ್ದುಗೊಳಿಸಿದೆ.

ಹೊರರೋಗಿ ವಿಭಾಗದಲ್ಲಿ ವೈದ್ಯರನ್ನು ಭೇಟಿ ಮಾಡಲು ಅಥವಾ ನಿಗದಿತ ಶಸ್ತ್ರಚಿಕಿತ್ಸೆಗಳಿಗೆ ದಾಖಲಾಗುವ ರೋಗಿಗಳನ್ನು ಅವರ ಅಪಾಯಿಂಟ್‌ಮೆಂಟ್‌ಗಳನ್ನು ಮರು ನಿಗದಿಪಡಿಸಿದ ನಂತರ ಮನೆಗೆ ಹಿಂತಿರುಗಿಸುವುದರಿಂದ ಇದೇ ರೀತಿಯ ಸನ್ನಿವೇಶವು ಇತರ ಆಸ್ಪತ್ರೆಗಳಲ್ಲಿ ಕಂಡುಬಂತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT