ದೋಡಾದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆ 
ದೇಶ

ಜಮ್ಮು-ಕಾಶ್ಮೀರ: ದೋಡಾ ಎನ್ ಕೌಂಟರ್; ಸೇನಾ ಅಧಿಕಾರಿ ಹುತಾತ್ಮ, ನಾಲ್ವರು ಉಗ್ರರ ಹತ್ಯೆ

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ 48 ನೇ ರಾಷ್ಟ್ರೀಯ ರೈಫಲ್ಸ್ ನ ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್ ಸಿಂಗ್ ಹುತಾತ್ಮರಾಗಿದ್ದಾರೆ.

ದೋಡಾ: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅಪರಿಚಿತ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ.

ಉಗ್ರರು ಅಡಗಿರುವ ಮಾಹಿತಿ ತಿಳಿದು ದೋಡಾದ ಅಸ್ಸಾರ್ ಪ್ರದೇಶದ ಶಿವಗಢ-ಅಸ್ಸಾರ್ ಬೆಲ್ಟ್‌ನ ಅರಣ್ಯ ಪ್ರದೇಶದಲ್ಲಿ ಜಂಟಿ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ 48 ನೇ ರಾಷ್ಟ್ರೀಯ ರೈಫಲ್ಸ್ ನ ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್ ಸಿಂಗ್ ಹುತಾತ್ಮರಾಗಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಮುಂಚಿತವಾಗಿ ನಡೆದ ಎನ್‌ಕೌಂಟರ್‌ನಲ್ಲಿ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಹಿಂಸಾಚಾರದ ಉಲ್ಬಣಕ್ಕೆ ಸಾಕ್ಷಿಯಾಗಿರುವ ಜಮ್ಮು ಪ್ರದೇಶದಲ್ಲಿ ಸರಣಿ ಘಟನೆಗಳ ಸರಣಿಯಲ್ಲಿ ಇದು ಇತ್ತೀಚಿನದ್ದಾಗಿದೆ.

ಶಿವಗಢ-ಅಸ್ಸಾರ್ ಬೆಲ್ಟ್‌ನಲ್ಲಿ ಅಡಗಿರುವ ವಿದೇಶಿ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಜಂಟಿ ತಂಡವು ಪ್ರದೇಶ ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿತು. (CASO) ಈ ಸಮಯದಲ್ಲಿ ದಟ್ಟ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಗುಂಡಿನ ಚಕಮಕಿಯಾಯಿತು.

ನಾಲ್ವರು ಉಗ್ರರ ಹತ್ಯೆ: ಎನ್‌ಕೌಂಟರ್‌ನಲ್ಲಿ ಇತರ ನಾಲ್ವರು ಭಯೋತ್ಪಾದಕರು ಸಹ ಗುಂಡೇಟಿಗೆ ಬಲಿಯಾಗಿದ್ದಾರೆ. ನಿನ್ನೆ ಸಾಯಂಕಾಲ ಸೇನಾ ಸಿಬ್ಬಂದಿ ಶೋಧ ಕಾರ್ಯಾಚರಣೆ ವೇಳೆ ಅರಣ್ಯ ಪ್ರದೇಶದಲ್ಲಿ ಅಡಗಿರುವ ಉಗ್ರರ ಗುಂಪನ್ನು ಪತ್ತೆ ಹಚ್ಚಿದ ಬಳಿಕ ಎನ್‌ಕೌಂಟರ್ ಆರಂಭವಾಯಿತು.

ಆರಂಭಿಕ ಗುಂಡಿನ ಚಕಮಕಿಯ ನಂತರ, ಉಗ್ರರು ತಪ್ಪಿಸಿಕೊಂಡರು, ಆದರೆ ಭದ್ರತಾ ಪಡೆಗಳು ಅವರನ್ನು ಬೆನ್ನಟ್ಟಿದ್ದು, ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಮೂಲಗಳ ಪ್ರಕಾರ, ಉಗ್ರರು ಶಿವಗಢ-ಅಸಾರ್ ಬೆಲ್ಟ್‌ನಲ್ಲಿ ಅಡಗಿಕೊಂಡಿದ್ದು, ಈ ಪ್ರದೇಶದಲ್ಲಿ ರಕ್ತದ ಕಲೆಗಳು ಕಂಡುಬಂದಿರುವುದರಿಂದ ಅವರಲ್ಲಿ ಕೆಲವರು ಗಾಯಗೊಂಡಿರಬಹುದು ಎನ್ನಲಾಗಿದೆ. ಭಾರೀ ಗುಂಡಿನ ಚಕಮಕಿಯ ನಡುವೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದೆ.

ಸೇನಾ ಮುಖ್ಯಸ್ಥ (COAS) ಜನರಲ್ ಉಪೇಂದ್ರ ದ್ವಿವೇದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ದೋಡಾ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರ ವಿರೋಧಿ ಕಾರ್ಯಾಚರಣೆಗಳ ಬಗ್ಗೆ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಗ್ರರು ಈ ಹಿಂದೆ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರು. ದೋಡಾ ಜಿಲ್ಲೆಯಲ್ಲಿ ಸೈನಿಕರೊಂದಿಗೆ ಎನ್‌ಕೌಂಟರ್‌ನಲ್ಲಿ ತೊಡಗಿದ್ದರು.

ಈ ವರ್ಷ ಜೂನ್‌ನಿಂದ ಜಮ್ಮು ಪ್ರದೇಶದಲ್ಲಿ ಉಗ್ರಗಾಮಿಗಳ ಹಿಂಸಾಚಾರ ಮತ್ತು ದಾಳಿಗಳು ಹಠಾತ್ ಉಲ್ಬಣಗೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT