ಸಾಂದರ್ಭಿಕ ಚಿತ್ರ 
ದೇಶ

ಹರಿಯಾಣ ವಿಧಾನಸಭೆ ಚುನಾವಣೆ: 2,500 ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು; ಆಂತರಿಕ ಸಮೀಕ್ಷೆ ಮೊರೆ ಹೋದ ಬಿಜೆಪಿ

ಶಾಸಕರು, ಮಾಜಿ ಶಾಸಕರು, ರಾಜಕೀಯ ನಾಯಕರ ಬಂಧುಗಳು, ವಕೀಲರು, ವೈದ್ಯರು, ನಿವೃತ್ತ ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಕರು, ಕೆಲವು ಪತ್ರಕರ್ತರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿತ್ತು.

ಚಂಡೀಗಢ: ಈ ವರ್ಷಾಂತ್ಯದಲ್ಲಿ ನಡೆಯಲಿರುವ 90 ಸದಸ್ಯ ಬಲದ ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ಗಾಗಿ 2,556 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಮುಖಂಡರು ತಮ್ಮ ಶಾಸಕರ ಆಯ್ಕೆಗೆ ಆಂತರಿಕ ಸಮೀಕ್ಷೆಯ ಮೊರೆ ಹೋಗಿದೆ.

ಕರ್ನಾಲ್ ಜಿಲ್ಲೆಯ ನಿಲೋಖೇರಿ (ಮೀಸಲಾತಿ) ಕ್ಷೇತ್ರದಿಂದ ಪಕ್ಷದ ಅತಿ ಹೆಚ್ಚು 88 ಅಭ್ಯರ್ಥಿಗಳು ಮತ್ತು ಜೂಲಾನಾಗೆ 86 ಟಿಕೆಟ್ ಆಕಾಂಕ್ಷಿಗಳು ಇದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಶಾಸಕರು, ಮಾಜಿ ಶಾಸಕರು, ರಾಜಕೀಯ ನಾಯಕರ ಬಂಧುಗಳು, ವಕೀಲರು, ವೈದ್ಯರು, ನಿವೃತ್ತ ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಕರು, ಕೆಲವು ಪತ್ರಕರ್ತರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿತ್ತು. ರೋಹ್ಟಕ್ ಸಂಸದ ದೀಪೇಂದರ್ ಹೂಡಾ ನೇತೃತ್ವದಲ್ಲಿ ಕಾಂಗ್ರೆಸ್ 'ಹರಿಯಾಣ ಮಾಂಗೆ ಹಿಸಾಬ್' ಪ್ರಚಾರವನ್ನು ಹೆಚ್ಚಿಸುತ್ತಿದೆ.

ಅಭ್ಯರ್ಥಿ ಆಯ್ಕೆಯಲ್ಲಿ ತನ್ನ ಕಾರ್ಯಕರ್ತರನ್ನು ತೊಡಗಿಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಭಾನುವಾರ, ರಾಜ್ಯದ ಪಕ್ಷದ ಪದಾಧಿಕಾರಿಗಳು ತಮ್ಮ ಶಾಸಕ ಅಭ್ಯರ್ಥಿಗಳ ಆಯ್ಕೆಗೆ ಮತ ಚಲಾಯಿಸಿದರು. ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಿಂದ ಸೂಕ್ತ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸೂಚಿಸಲಾಗಿದೆ. ನೂರಾರು ಸಂಖ್ಯೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿರುವುದರಿಂದ ಪಕ್ಷದೊಳಗೆ ಒಲವು ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸಲು ಆಂತರಿಕ ಸಮೀಕ್ಷೆ ಸಮೀಕ್ಷೆ ನಡೆಸಲಾಗುವುದು, ಸಮೀಕ್ಷೆ ಫಲಿತಾಂಶದಂತೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಇಸಿ ರಾಜೀವ್ ಕುಮಾರ್ ನೇತೃತ್ವದ ಮೂರು ಸದಸ್ಯರ ಚುನಾವಣಾ ಆಯೋಗದ ತಂಡವು ಆಗಸ್ಟ್ 12 ಮತ್ತು 13 ರಂದು ಚಂಡೀಗಢಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಹರಿಯಾಣ ವಿಧಾನಸಭೆಯ ಅವಧಿ ನವೆಂಬರ್ 3 ರಂದು ಮುಕ್ತಾಯಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT