ಪ್ರಧಾನಿ ನರೇಂದ್ರ ಮೋದಿ-ಮೊಹಮ್ಮದ್ ಯೂನಸ್  online desk
ದೇಶ

ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ರಕ್ಷಣೆ: ಪ್ರಧಾನಿ ಮೋದಿಗೆ ಭರವಸೆ ನೀಡಿದ ಮೊಹಮ್ಮದ್ ಯೂನಸ್

ನಿನ್ನೆ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಪರಿಸ್ಥಿತಿಯು ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಆಶಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದರು.

ನವದೆಹಲಿ: ಮೊಹಮ್ಮದ್ ಯೂನಸ್ ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾದ ಮೊಹಮ್ಮದ್ ಯೂನಸ್ ತಮಗೆ ಕರೆ ಮಾಡಿದ್ದು ಬಾಂಗ್ಲಾದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ.

ನಿನ್ನೆ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಪರಿಸ್ಥಿತಿಯು ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಆಶಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. 140 ಕೋಟಿ ಭಾರತೀಯರು ನೆರೆಯ ದೇಶದಲ್ಲಿ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿದ್ದಾರೆ.

"ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದೆ. ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಈ ವೇಳೆ ಪ್ರಧಾನಿ ಮೋದಿ ಪುನರುಚ್ಚರಿಸಿದರು. ಬಾಂಗ್ಲಾ ಸರ್ಕಾರದ ಮುಖ್ಯಸ್ಥರು ಬಾಂಗ್ಲಾದೇಶದ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಭರವಸೆ ನೀಡಿದರು" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಂಗಳವಾರ, ಯೂನಸ್ ಅವರು ರಾಜಧಾನಿ ಢಾಕಾದಲ್ಲಿರುವ ಢಾಕೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬಾಂಗ್ಲಾದೇಶದ ಹಿಂದೂಗಳೊಂದಿಗೆ ಮಾತನಾಡಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಇತ್ತೀಚಿನ ಹಿಂಸಾಚಾರದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸಿದವರನ್ನು ಶಿಕ್ಷಿಸುವುದಾಗಿ ಅವರು ಭರವಸೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?