ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ 
ದೇಶ

ಆರ್‌ಜಿ ಕಾರ್ ಕಾಲೇಜು ಮಾಜಿ ಪ್ರಾಂಶುಪಾಲರಿಗೆ ಬೆದರಿಕೆ; ರಕ್ಷಣೆ ಕೋರಿದ ಡಾ. ಸಂದೀಪ್ ಘೋಷ್

ಈ ಪ್ರಕರಣದಲ್ಲಿ ಆರ್‌ಜಿ ಕಾರ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ.

ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರು ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದು, ರಕ್ಷಣೆ ಕೋರಿ ಕಲ್ಕತ್ತಾ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪೊಲೀಸ್ ರಕ್ಷಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇನ್ನೇನಾದರೂ ಅಥವಾ ಇತರ ಯಾವುದೇ ಹಕ್ಕುಗಳನ್ನು ನಮೂದಿಸಬೇಕಾದರೆ ಪ್ರತ್ಯೇಕ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಪ್ರಾಂಶುಪಾಲರ ಪರ ವಕೀಲರಿಗೆ ಹೇಳಿದೆ.

ನ್ಯಾಯಾಲಯದಲ್ಲಿ ವಾದ ಮಂಡಿಸಿದ ಮಾಜಿ ಪ್ರಾಂಶುಪಾಲರ ಪರ ವಕೀಲರು, ನಮ್ಮ ಕಕ್ಷಿದಾರರು ಸಿಬಿಐ ತನಿಖೆಗೆ ಸಹಕರಿಸಲು ಸಿದ್ಧರಿದ್ದಾರೆ. ಆದರೆ ಅವರ ಮನೆಯ ಹೊರಗೆ ನಿರಂತರ ಪ್ರತಿಭಟನೆ ನಡೆಯುತ್ತಿದೆ, ಅವರಿಗೆ ಭದ್ರತೆ ಸಿಕ್ಕರೆ ಇಂದೇ ಸಿಬಿಐ ಮುಂದೆ ಹಾಜರಾಗಬಹುದು ಎಂದು ಹೇಳಿದರು.

ಈ ಪ್ರಕರಣದಲ್ಲಿ ಆರ್‌ಜಿ ಕಾರ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ.

ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಪಶ್ಚಿಮ ಬಂಗಾಳದಾದ್ಯಂತ ಮಹಿಳೆಯರ ಮಧ್ಯರಾತ್ರಿ ಪ್ರತಿಭಟನೆಯ ನಡುವೆ ಗುರುವಾರ ದುಷ್ಕರ್ಮಿಗಳು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಶುಶ್ರೂಷಾ ಕೇಂದ್ರ, ಔಷಧಿ ಅಂಗಡಿ ಮತ್ತು ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ನುಗ್ಗಿ ಧ್ವಂಸಗೊಳಿಸಿದ್ದಾರೆ. ಈ ಹಿಂಸಾಚಾರದಲ್ಲಿ ಕೆಲವು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು 19 ಮಂದಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್