ಪ್ರತಿಭಟನೆ ವೇಳೆ ಪಿಸ್ತೂಲ್ ಪ್ರದರ್ಶಿಸಿದ ಗೋವಿಂದ್ ಗಜೇರಾ  
ದೇಶ

ಕೋಲ್ಕತ್ತಾ ಅತ್ಯಾಚಾರ-ಕೊಲೆ ಖಂಡಿಸಿ ಪ್ರತಿಭಟನೆ: ಪಿಸ್ತೂಲ್ ಪ್ರದರ್ಶಿಸಿದ ಗುಜರಾತ್ ವೈದ್ಯನ ವಿರುದ್ಧ ಕೇಸ್ ದಾಖಲು

ಅಹಮದಾಬಾದ್: ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ-ಹತ್ಯೆಯನ್ನು ಖಂಡಿಸಿ ಶುಕ್ರವಾರ ನಡೆದ ಪ್ರತಿಭಟನೆ ವೇಳೆ ಪಿಸ್ತೂಲ್ ಪ್ರದರ್ಶಿಸಿದ ಗೋವಿಂದ್ ಗಜೇರಾ ಎಂಬ ವೈದ್ಯನು ವಿರುದ್ಧ ಪೊಲೀಸರು ಶನಿವಾರ ಕೇಸ್ ದಾಖಲಿಸಿದ್ದಾರೆ.

ಪ್ರತಿಭಟನೆ ವೇಳೆ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವಾಗ ಗೋವಿಂದ್ ಗಜೇರಾ ಅವರು ತಮ್ಮ ಪರವಾನಗಿ ಪಡೆದ ಪಿಸ್ತೂಲ್ ಅನ್ನು ಪ್ರದರ್ಶಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಶುಕ್ರವಾರ ಅಮ್ರೇಲಿಯ ಶಾಂತಾಬಾ ವೈದ್ಯಕೀಯ ಕಾಲೇಜಿನ ಇಂಟರ್ನ್ ವೈದ್ಯರು ಅಹಮದಾಬಾದ್‌ನ ರಾಜಕಮಲ್ ಚೌಕ್‌ನಲ್ಲಿ ಕ್ಯಾಂಡಲ್‌ಲೈಟ್ ಮೆರವಣಿಗೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಡಾ. ಗಜೇರಾ ಅವರು ತಮ್ಮ ಪರವಾನಿಗೆ ಪಡೆದಿರುವ ರಿವಾಲ್ವರ್ ಅನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾರೆ ಮತ್ತು ನಮ್ಮ ರಕ್ಷಣೆಗಾಗಿ ಶಸ್ತ್ರಸಜ್ಜಿತರಾಗುವಂತೆ ವೈದ್ಯರಿಗೆ ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಅವರು ಪಿಸ್ತೂಲ್ ಹಿಡಿದಿರುವುದು ಕಂಡುಬಂದಿದ್ದು, ಡಾ.ಗಜೇರಾ ಅವರು ತಮ್ಮ ಭಾಷಣದಲ್ಲಿ, “ಪ್ರತಿಯೊಬ್ಬರೂ ತಮ್ಮ ಸುರಕ್ಷತೆಗಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿರಬೇಕು. ಮುಂದಿನ ಐದು ವರ್ಷಗಳಲ್ಲಿ, ಇಂತಹ ಘಟನೆಗಳು ಗಣನೀಯವಾಗಿ ಹೆಚ್ಚಾಗುತ್ತವೆ ಎಂದು ಹೇಳಿದ್ದಾರೆ.

ಪರವಾನಗಿ ಪಡೆದ ಪಿಸ್ತೂಲ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಡಾ. ಗಜೇರಾ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ(BNS)ಯ ಸೆಕ್ಷನ್ 353(1)(b) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಅಮ್ರೇಲಿ ಪೊಲೀಸ್ ಉಪಾಧೀಕ್ಷಕ(ಡಿವೈಎಸ್ಪಿ) ಚಿರಾಗ್ ದೇಸಾಯಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!