ನಾರಾಯಣ ಮೂರ್ತಿ 
ದೇಶ

ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯಾ ನಿಯಂತ್ರಣದತ್ತ ಗಮನ ಹರಿಸದ ಭಾರತೀಯರು- ನಾರಾಯಣ ಮೂರ್ತಿ

'ಭಾರತವು ಜನಸಂಖ್ಯೆ, ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ'

ಪ್ರಯಾಗ್‌ರಾಜ್: ಹೆಚ್ಚುತ್ತಿರುವ ಜನಸಂಖ್ಯೆಯು ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದಿರುವ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ , ತುರ್ತು ಪರಿಸ್ಥಿತಿ ಕಾಲದಿಂದಲೂ ಭಾರತೀಯರು ಜನಸಂಖ್ಯೆ ನಿಯಂತ್ರಣದ ಬಗ್ಗೆ ಗಮನ ಹರಿಸಿಲ್ಲ ಎಂದು ಹೇಳಿದ್ದಾರೆ.

ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ನಾರಾಯಣ ಮೂರ್ತಿ, ಭಾರತವು ಜನಸಂಖ್ಯೆ, ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ ಎಂದರು.

ತುರ್ತು ಪರಿಸ್ಥಿತಿ ಕಾಲದಿಂದಲೂ ನಾವು ಭಾರತೀಯರು ಜನಸಂಖ್ಯೆ ನಿಯಂತ್ರಣಕ್ಕೆ ಸಾಕಷ್ಟು ಗಮನ ಹರಿಸಿಲ್ಲ. ಇದು ನಮ್ಮ ದೇಶವನ್ನು ಸುಸ್ಥಿರಗೊಳಿಸುವಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಹೇಳಿದರು.

ಯುಎಸ್, ಬ್ರೆಜಿಲ್ ಮತ್ತು ಚೀನಾದಂತಹ ದೇಶಗಳಿಗೆ ಹೋಲಿಸಿದರೆ ಅವುಗಳು ಹೆಚ್ಚಿನ ಭೂಮಿ ಲಭ್ಯತೆ ಹೊಂದಿವೆ. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನಿಜವಾದ ವೃತ್ತಿಪರನ ಜವಾಬ್ದಾರಿಯಾಗಿದೆ. ಈ ಕೊಡುಗೆಯು ಹೆಚ್ಚಿನ ಆಕಾಂಕ್ಷೆ ಹೊಂದುವುದು, ದೊಡ್ಡ ಕನಸು ಕಾಣುವುದು ಮತ್ತು ಆ ಕನಸುಗಳನ್ನು ವಾಸ್ತವಕ್ಕೆ ತಿರುಗಿಸಲು ಶ್ರಮಿಸುವುದರ ಮೇಲೆ ಅವಲಂಬಿತವಾಗಿದೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕರು ಹೇಳಿದರು.

ಒಂದು ತಲೆಮಾರು ಮುಂದಿನವರ ಬದುಕನ್ನು ಹಸನಾಗಿಸಲು ಹಲವಾರು ತ್ಯಾಗಗಳನ್ನು ಮಾಡಬೇಕು. ನನ್ನ ಪ್ರಗತಿಗಾಗಿ ನನ್ನ ತಂದೆ-ತಾಯಿ, ಒಡಹುಟ್ಟಿದವರು ಮತ್ತು ಶಿಕ್ಷಕರು ಗಣನೀಯ ತ್ಯಾಗ ಮಾಡಿದ್ದಾರೆ. ಇಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿರುವುದು ಅವರ ತ್ಯಾಗ ವ್ಯರ್ಥವಾಗಲಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT