ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮುಂಬೈ: ಆಸ್ಪತ್ರೆಯಲ್ಲಿ ಮಹಿಳಾ ಡಾಕ್ಟರ್ ಮೇಲೆ ಹಲ್ಲೆ, ಇಬ್ಬರ ಬಂಧನ

ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ವತ್ರೆಯಲ್ಲಿನ ಕ್ಯಾಶುಲಿಟಿ ವಾರ್ಡ್ ನಲ್ಲಿ ವ್ಯಕ್ತಿಯೊಬ್ಬರ ಕಿವಿಯಿಂದ ಸುರಿಯುತ್ತಿದ್ದ ರಕ್ತವನ್ನು ಸ್ವಚ್ಚಗೊಳಿಸುತ್ತಿದ್ದ ಡಾಕ್ಟರ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ.

ಸಿಯೋನ್ ಆಸ್ಪತ್ರೆ
Nagaraja AB
Updated On : 18 Aug 2024, 4:50 pm

ಮುಂಬೈ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಮಹಿಳಾ ವೈದ್ಯೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ವತ್ರೆಯಲ್ಲಿನ ಕ್ಯಾಶುಲಿಟಿ ವಾರ್ಡ್ ನಲ್ಲಿ ವ್ಯಕ್ತಿಯೊಬ್ಬರ ಕಿವಿಯಿಂದ ಸುರಿಯುತ್ತಿದ್ದ ರಕ್ತವನ್ನು ಸ್ವಚ್ಚಗೊಳಿಸುತ್ತಿದ್ದ ಡಾಕ್ಟರ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ವ್ಯಕ್ತಿ ಕಿರುಚಿದ್ದು ವಾಗ್ವಾದಕ್ಕೆ ಕಾರಣವಾಗಿದೆ. ರೋಗಿಯೊಂದಿಗೆ ಬಂದಿದ್ದವರಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮಹಾರಾಷ್ಟ್ರ ಆರೋಗ್ಯ ಸೇವಾ ವ್ಯಕ್ತಿಗಳು ಸೇವಾ ಸಂಸ್ಥೆಗಳಲ್ಲಿ ಹಿಂಸಾಚಾರ ಮತ್ತು ಹಾನಿ ಅಥವಾ ಆಸ್ತಿ ನಷ್ಟ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Advertisement

Advertisement

ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕುಡಿದ ಅಮಲಿನಲ್ಲಿದ್ದ 5-6 ಜನರ ಗುಂಪು ಬೆದರಿಸಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದೆ. ತನ್ನನ್ನು ತಾನು ರಕ್ಷಿಸಿಕೊಳ್ಳುವಾಗ ಆಕೆಗೂ ಗಾಯಗಳಾಗಿವೆ ಎಂದು ಸಿಯೋನ್ ಆಸ್ಪತ್ರೆ ತಿಳಿಸಿದೆ.

Also Read

ಪಶ್ಚಿಮ ಬಂಗಾಳ: ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ, ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ, ಬೃಹತ್ ಪ್ರತಿಭಟನೆ

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಕುರಿತು ವೈದ್ಯಕೀಯ ಸಮುದಾಯದಿಂದ ರಾಷ್ಟ್ರವ್ಯಾಪಿ ಮುಷ್ಕರಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವಂತೆಯೇ ಮುಂಬೈಯಲ್ಲಿ ನಡೆದಿರುವ ಈ ಘಟನೆ ದೇಶದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಆತಂಕ ಮೂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement