ಒಡಿಶಾದಲ್ಲಿ ಎಡಬಿಡದೆ ಮಳೆ ಸುರಿದು ಜನ ಜೀವನ ಅಸ್ತವ್ಯಸ್ತವಾಗಿತ್ತು. ಇದೀಗ ಸಿಡಿಲು ಬಡಿದು ಘೋರ ಘಟನೆಗಳು ಬೆಳಕಿಗೆ ಬಂದಿವೆ. ರಾಜ್ಯದ 6 ಜಿಲ್ಲೆಗಳಲ್ಲಿ ಸಿಡಿಲು ಬಡಿದು 9 ಮಂದಿ ಸಾವನ್ನಪ್ಪಿದ್ದು 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈ ಘಟನೆಯು ಮಯೂರ್‌ಭಂಜ್, ಭದ್ರಕ್, ಕೇಂದ್ರಪಾರ, ಗಂಜಾಂ, ಕಿಯೋಜಾರ್ ಮತ್ತು ಧೆಂಕನಲ್ ಜಿಲ್ಲೆಗಳಲ್ಲಿ ನಡೆದಿದೆ. ಘಟನೆಗೆ ರಾಜ್ಯ ಸಿಎಂ ಮೋಹನ್ ಚರಣ್ ಮಾಝಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಘೋಷಿಸಿದೆ.
ಮುಖ್ಯಮಂತ್ರಿ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, ಮಯೂರ್‌ಭಂಜ್, ಬಾಲಸೋರ್ ಮತ್ತು ಭದ್ರಕ್ ಜಿಲ್ಲೆಗಳಲ್ಲಿ ತಲಾ ಎರಡು ಸಾವು ವರದಿಯಾಗಿವೆ. ಅದೇ ಸಮಯದಲ್ಲಿ, ಕಿಯೋಂಜಾರ್, ಧೆಂಕನಲ್ ಮತ್ತು ಗಂಜಾಂ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿರುವ ಮಾಹಿತಿ ಬೆಳಕಿಗೆ ಬಂದಿದೆ.
ಘಟನೆಗೆ ರಾಜ್ಯದ ಸಿಎಂ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೋಹನ್ ಚರಣ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಇದರೊಂದಿಗೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಮಯೂರ್‌ಭಂಜ್‌ನಲ್ಲಿ ಬೈಸಿಂಗಾ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಾರಪಾರ ಗ್ರಾಮದಲ್ಲಿ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ದಂಪತಿಗೆ ಸಿಡಿಲು ಬಡಿದಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಕ್‌ನಲ್ಲಿ ಅಗರಪಾದ ಪೊಲೀಸ್ ಠಾಣಾ ವ್ಯಾಪ್ತಿಯ ಸಾಹುಪಾದ ಗ್ರಾಮದಲ್ಲಿ ಸಿಡಿಲು ಬಡಿದು ಅಮರ್ ಸೇಥಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು 12 ಮಂದಿಗೆ ಗಾಯ
ಬರ್ಗಢ್ ಜಿಲ್ಲೆಯಿಂದ ಬಂದ ಮಾಹಿತಿಯ ಪ್ರಕಾರ, ಬಾರ್ಪಾಲಿ ಬ್ಲಾಕ್‌ನ ಮುನುಪಾಲಿ ಗ್ರಾಮದ ಬಳಿಯ ಹೊಲದಲ್ಲಿ ಸಿಡಿಲು ಬಡಿದಿದೆ. ಇದರಿಂದ 12 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 4 ಜನರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.