ಅನ್ವರ್ ಬಿನ್ ಇಬ್ರಾಹಿಂ 
ದೇಶ

2018ರ ನಂತರ ಮೊದಲ ಬಾರಿಗೆ ಭಾರತಕ್ಕೆ ಮಲೇಷ್ಯಾ ಪ್ರಧಾನಿ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಲೇಷ್ಯಾ ಪ್ರಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಇದು ಮಲೇಷ್ಯಾ ಪ್ರಧಾನಿಯಾಗಿ ಅನ್ವರ್ ಬಿನ್ ಇಬ್ರಾಹಿಂ ಅವರ ಮೊದಲ ಭೇಟಿಯಾಗಿದೆ.

ನವದೆಹಲಿ: 2018ರ ನಂತರ ಮೊದಲ ಬಾರಿಗೆ ಮಲೇಷ್ಯಾ ಪ್ರಧಾನಿ ಅನ್ವರ್ ಬಿನ್ ಇಬ್ರಾಹಿಂ ಅವರು ಆಗಸ್ಟ್ 19 ಮತ್ತು 21 ರಂದು ಎರಡು ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಲೇಷ್ಯಾ ಪ್ರಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಇದು ಮಲೇಷ್ಯಾ ಪ್ರಧಾನಿಯಾಗಿ ಅನ್ವರ್ ಇಬ್ರಾಹಿಂ ಅವರ ಮೊದಲ ಭೇಟಿಯಾಗಿದೆ.

ಮಂಗಳವಾರ, ಆಗಸ್ಟ್ 20 ರಂದು ಪ್ರಧಾನಿ ಅನ್ವರ್ ಬಿನ್ ಇಬ್ರಾಹಿಂ ಅವರನ್ನು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ವಿಧ್ಯುಕ್ತವಾಗಿ ಸ್ವಾಗತಿಸಲಾಗುತ್ತದೆ. ನಂತರ ಮಹಾತ್ಮಾ ಗಾಂಧಿ ಅವರಿಗೆ ಗೌರವ ಸಲ್ಲಿಸಲು ರಾಜ್ ಘಾಟ್‌ಗೆ ಭೇಟಿ ನೀಡಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

“ಭಾರತ ಮತ್ತು ಮಲೇಷ್ಯಾ ಬಲವಾದ ಐತಿಹಾಸಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಬಂಧಗಳನ್ನು ಹೊಂದಿವೆ. 2015 ರಲ್ಲಿ ಪ್ರಧಾನಿ ಮೋದಿಯವರ ಭೇಟಿಯ ಸಮಯದಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧವನ್ನು ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಾನಮಾನಕ್ಕೆ ಏರಿಸಲಾಯಿತು. ಅನ್ವರ್ ಇಬ್ರಾಹಿಂ ಅವರ ಭೇಟಿಯು ಭಾರತ-ಮಲೇಷ್ಯಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದಾರಿ ಮಾಡಿಕೊಡುತ್ತದೆ” ಎಂದು ಎಂಇಎ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ