CRPF ಸಿಬ್ಬಂದಿಯ ಪ್ರಾತಿನಿಧಿಕ ಚಿತ್ರ File Photo | EPS
ದೇಶ

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ CRPF ಇನ್ಸ್ ಪೆಕ್ಟರ್ ಹುತಾತ್ಮ!

ಬಸಂತ್‌ಗಢದ ದುಡು ಪ್ರದೇಶದಲ್ಲಿ ಮಧ್ಯಾಹ್ನ 3:30 ರ ಸುಮಾರಿನಲ್ಲಿ ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.

ಉದ್ದಂಪುರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿಗೆ ಉಗ್ರರ ಒಳನುಸುಳುವಿಕೆ ಪ್ರಕರಣ ಹೆಚ್ಚಾಗುತ್ತಿದ್ದು, ಸೋಮವಾರ ಉಗ್ರರ ದಾಳಿಯಲ್ಲಿ ಓರ್ವ ಸಿಆರ್ ಪಿಎಫ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದಾರೆ.

ಉದ್ದಂಪುರ ಜಿಲ್ಲೆಯಲ್ಲಿ ಗಸ್ತು ಪಡೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸಂತ್‌ಗಢದ ದುಡು ಪ್ರದೇಶದಲ್ಲಿ ಮಧ್ಯಾಹ್ನ 3:30 ರ ಸುಮಾರಿನಲ್ಲಿ ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಇದರಿಂದ 187ನೇ ಬೆಟಾಲಿಯನ್‌ಗೆ ಸೇರಿದ ಸಿಆರ್‌ಪಿಎಫ್‌ನ ಇನ್ಸ್‌ಪೆಕ್ಟರ್‌ಗೆ ಗುಂಡು ತಗುಲಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಹುತಾತ್ಮರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಂಟಿ ಗಸ್ತು ತಂಡ ಬಲವಾದ ಪ್ರತೀಕಾರದ ಮೂಲಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಮತ್ತಷ್ಟು ಸೇನೆ ಸ್ಥಳಕ್ಕೆ ಧಾವಿಸಿದ್ದು, ಉಗ್ರರನ್ನು ಪತ್ತೆ ಹಚ್ಚಿ, ಹೊಡೆದುರುಳಿಸಲು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video