ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ಎನ್ ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಗೆ ಕೇಂದ್ರದಿಂದ ಝಡ್ ಪ್ಲಸ್ ಭದ್ರತೆ

ಶರದ್ ಪವಾರ್ ಅವರ ಭದ್ರತೆಗಾಗಿ 55 ಶಸ್ತ್ರಸಜ್ಜಿತ ಸಿಆರ್‌ಪಿಎಫ್ ಸಿಬ್ಬಂದಿಯ ತಂಡವನ್ನು ನಿಯೋಜಿಸಲಾಗಿದೆ.

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್‌ ಅವರಿಗೆ ಕೇಂದ್ರ ಸರ್ಕಾರ ಬುಧವಾರ ಅತ್ಯುನ್ನತ ವರ್ಗದ ಸಶಸ್ತ್ರ ವಿಐಪಿ ಭದ್ರತೆ ಝಡ್ ಪ್ಲಸ್ ಭದ್ರತೆ ಒದಗಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವಾಲಯವು 83 ವರ್ಷದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಗೆ ಝಡ್ ಪ್ಲಸ್ ಭದ್ರತೆ ಒದಗಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಗೆ ಸೂಚಿಸಿದೆ.

ಶರದ್ ಪವಾರ್ ಅವರ ಭದ್ರತೆಗಾಗಿ 55 ಶಸ್ತ್ರಸಜ್ಜಿತ ಸಿಆರ್‌ಪಿಎಫ್ ಸಿಬ್ಬಂದಿಯ ತಂಡವನ್ನು ನಿಯೋಜಿಸಲಾಗಿದೆ.

ಕೇಂದ್ರ ಗುಪ್ತಚರ ಸಂಸ್ಥೆಗಳು, ಶರದ್ ಪವಾರ್ ಅವರಿಗೆ ಕೆಲವು ಸಮಾಜ ಘಾತುಕ ಶಕ್ತಿಗಳಿಂದ ಅಪಾಯವಿದೆ ಎಂಬ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರಿಗೆ ಝೆಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶರದ್ ಪವಾರ್ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲು ಸಿಆರ್‌ಪಿಎಫ್ ತಂಡ ಈಗಾಗಲೇ ಮಹಾರಾಷ್ಟ್ರದಲ್ಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel