ಆಸ್ಪತ್ರೆಯೊಳಗೆ ಧ್ವಂಸ ನಡೆಸಿದ ಘಟನೆ  
ದೇಶ

ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ವಿಧ್ವಂಸಕ ಕೃತ್ಯ: ಮೂವರು ಅಧಿಕಾರಿಗಳು ಅಮಾನತು, CISF ಭದ್ರತೆ

ಅಮಾನತುಗೊಂಡಿರುವ ಪೊಲೀಸರಲ್ಲಿ ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾ: ಕಳೆದ ವಾರ ಇಲ್ಲಿನ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡಿರುವ ಪೊಲೀಸರಲ್ಲಿ ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 15 ರ ಮುಂಜಾನೆ ಕಿಡಿಗೇಡಿಗಳ ಗುಂಪು ಆಸ್ಪತ್ರೆಯೊಳಗೆ ನುಗ್ಗಿ ಅಲ್ಲಿನ ತುರ್ತು ವಿಭಾಗ, ನರ್ಸಿಂಗ್ ಸ್ಟೇಷನ್ ಮತ್ತು ಔಷಧಿ ಅಂಗಡಿಯನ್ನು ಧ್ವಂಸಗೊಳಿಸಿತ್ತು.

ಆರೋಗ್ಯ ಕೇಂದ್ರದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಆರೋಪದ ವಿರುದ್ಧ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಮಹಿಳೆಯರು ಮಧ್ಯರಾತ್ರಿ ಪ್ರತಿಭಟನೆಯ ನಡುವೆ ಸರ್ಕಾರಿ ಆಸ್ಪತ್ರೆಯಲ್ಲಿ ಹಿಂಸಾಚಾರ ನಡೆದಿತ್ತು.

ಘಟನೆಗೆ ಸಂಬಂಧಿಸಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು ಮತ್ತು ಒಬ್ಬರು ಇನ್ಸ್‌ಪೆಕ್ಟರ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ತೀವ್ರ ಗಾಯದ ಗುರುತುಗಳೊಂದಿಗೆ ತರಬೇತಿ ನಿರತ ವೈದ್ಯೆ ಶವ ಪತ್ತೆಯಾಗಿತ್ತು. ಈ ಮಧ್ಯೆ, ಕಿರಿಯ ವೈದ್ಯರು ಸತತ 13 ನೇ ದಿನವೂ ತಮ್ಮ ಮುಷ್ಕರ ಮುಂದುವರಿಸಿದ್ದರಿಂದ ಬುಧವಾರ ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರಿತು.

ಹಲವಾರು ಆಸ್ಪತ್ರೆಗಳಲ್ಲಿ ಜೂನಿಯರ್ ವೈದ್ಯರ ಬದಲಿಗೆ ಕರ್ತವ್ಯಕ್ಕೆ ಹಾಜರಾಗಲು ಹಿರಿಯ ವೈದ್ಯರನ್ನು ಕೇಳಲಾಗಿದೆ, ರಾಜ್ಯ ಸರ್ಕಾರವು ಕೆಲಸಕ್ಕೆ ಬರುವಂತೆ ಪ್ರತಿಭಟನಾಕಾರರನ್ನು ಒತ್ತಾಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

CISF ಭದ್ಪತೆ: ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ CISF ಭದ್ರತೆ ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ನಂತರ, ಕೇಂದ್ರ ಅರೆಸೇನಾ ಪಡೆಯ ತಂಡವು ಇಂದು ಸರ್ಕಾರಿ ವೈದ್ಯಕೀಯ ಸಂಸ್ಥೆಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿತು.

ಹಿರಿಯ ಅಧಿಕಾರಿ ನೇತೃತ್ವದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ತಂಡ ಬೆಳಗ್ಗೆ ಆಸ್ಪತ್ರೆಗೆ ತಲುಪಿದೆ. ಭದ್ರತಾ ವ್ಯವಸ್ಥೆಗಳ ಕುರಿತು ಅವರು ಸ್ಥಳೀಯ ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT