ರೈಲ್ವೆ ನಿಲ್ದಾಣದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ 
ದೇಶ

ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಎಂವಿಎ ಕರೆ

ಮುಂಬರುವ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಬುಧವಾರ ಕರೆದಿದ್ದ ಸಭೆಯಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲು ಎಂವಿಎ ನಿರ್ಧರಿಸಿದೆ.

ಮುಂಬೈ: ಮಹಾರಾಷ್ಟ್ರದ ಬದ್ಲಾಪುರದಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಶಾಲಾ ಅಟೆಂಡರ್‌ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಖಂಡಿಸಿ ಭಾರಿ ಪ್ರತಿಭಟನೆ ನಡೆಯುತ್ತಿರುವುದರ ಮಧ್ಯ ಮಹಾ ವಿಕಾಸ್ ಅಘಾಡಿ(ಎಂವಿಎ) ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಬುಧವಾರ ಕರೆದಿದ್ದ ಸಭೆಯಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲು ಎಂವಿಎ ನಿರ್ಧರಿಸಿದೆ.

ಈ ಕುರಿತು ಮಾತನಾಡಿದ ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವತ್, "ನಾವು ಸೀಟು ಹಂಚಿಕೆ ಬಗ್ಗೆ ಚರ್ಚಿಸಲು ಇಲ್ಲಿಗೆ ಬಂದಿದ್ದೇವೆ. ಆದರೆ ನಾವು ಸೀಟು ಹಂಚಿಕೆ ಬಗ್ಗೆ ಚರ್ಚಿಸಲಿಲ್ಲ. ಬದ್ಲಾಪುರ ಘಟನೆಯ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದ್ದು, ಈ ಬಗ್ಗೆ ಚರ್ಚಿಸಿದೆವು ಎಂದರು.

ಮಹಾರಾಷ್ಟ್ರದ ಜನರು ಆಕ್ರೋಶಗೊಂಡಿದ್ದಾರೆ ಮತ್ತು ಪ್ರತಿಭಟಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬದ್ಲಾಪುರ ಘಟನೆಗೆ ಸಂಬಂಧಿಸಿದಂತೆ ಎಂವಿಎ ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಲಿದೆ ಎಂದರು.

"ನಿನ್ನೆ, ಬದ್ಲಾಪುರ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ 300 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ... ಇದು ಅಸಂವಿಧಾನಿಕ ಸರ್ಕಾರ... ಅಪರಾಧಿಗಳು ಹೆಚ್ಚಾಗುತ್ತಿದ್ದಾರೆ ಎಂದು ಎನ್‌ಸಿಪಿ-ಎಸ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಅವರು ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್ ಮುಖಂಡ ಬಾಳಾಸಾಹೇಬ್ ಥೋರಟ್ ಕೂಡ ಮಾತನಾಡಿದ್ದು, ಇಂದು ಸಭೆ ನಡೆಸಿ ಆಗಸ್ಟ್ 24ರಂದು ಬಂದ್‌ಗೆ ಕರೆ ನೀಡಿದ್ದೇವೆ. ಬದ್ಲಾಪುರ ಘಟನೆ ಅತ್ಯಂತ ಗಂಭೀರವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT