ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿ 
ದೇಶ

ಆಂಧ್ರ ಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: 7 ಕಾರ್ಮಿಕರು ಸಾವು, 30 ಮಂದಿಗೆ ಗಾಯ

ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯಲ್ಲಿ ಈ ಸ್ಫೋಟ ಸಂಭವಿಸಿದೆ.

ಅನಕಪಲ್ಲಿ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಫಾರ್ಮಾ ಕಂಪನಿಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಕನಿಷ್ಠು ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯಲ್ಲಿ ಈ ಸ್ಫೋಟ ಸಂಭವಿಸಿದೆ.

ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಈ ವೇಳೆ ಹೆಚ್ಚಿನ ಕಾರ್ಮಿಕರು ಹೊರಗಿದ್ದರು. ಹೀಗಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ಎನ್‌ಟಿಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಘಟನೆ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾರ್ಮಿಕ, ಕೈಗಾರಿಕಾ ಸಚಿವ ವಾಸಮಶೆಟ್ಟಿ ಸುಭಾಷ್ ಅವರು, ''ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿದ್ದಾರೆ ಎಂದರು.

ಕಾರ್ಖಾನೆಯಲ್ಲಿನ ದಟ್ಟ ಹೊಗೆಯಿಂದಾಗಿ, ಇಲ್ಲಿಯವರೆಗೆ ಮೂವರು ಮೃತಪಟ್ಟಿದ್ದಾರೆ. ಸಾವುನೋವುಗಳ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಸ್ಫೋಟ ಸಂಭವಿಸಿದ ಸಮಯದಲ್ಲಿ ಸ್ಥಳದಲ್ಲಿದ್ದ ಒಟ್ಟು ಎಷ್ಟು ಸಿಬ್ಬಂದಿ ಇದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳಲ್ಲಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕಾರ್ಖಾನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆಯೇ ಅಥವಾ ಅಗ್ನಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಸ್ಫೋಟ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ