ಸಾಂದರ್ಭಿಕ ಚಿತ್ರ 
ದೇಶ

ಸುಪ್ರೀಂ ಕೋರ್ಟ್ ಮನವಿಗೆ ಸ್ಪಂದಿಸಿ AIIMS, RML, IGH ವೈದ್ಯರ ಮುಷ್ಕರ ವಾಪಸ್!

ಪ್ರತಿಭಟನಾನಿರತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ವೈದ್ಯರ ಮಂಡಳಿ ಶ್ಲಾಘಿಸಿದೆ.

ನವದೆಹಲಿ: ಕೋಲ್ಕತ್ತದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಮನವಿ ಮಾಡಿದ ನಂತರ ನವದೆಹಲಿಯ ಏಮ್ಸ್ ನ ಸ್ಥಾನಿಕ ಡಾಕ್ಟರ್ ಅಸೋಸಿಯೇಷನ್ ನಡೆಸುತ್ತಿದ್ದ 11 ದಿನಗಳ ಮುಷ್ಕರವನ್ನು ಹಿಂತೆಗೆದುಕೊಂಡಿದೆ.

ಸುಪ್ರೀಂ ಕೋರ್ಟ್‌ನ ಮನವಿ ಮತ್ತು ನಿರ್ದೇಶನಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವೈದ್ಯರ ಅಸೋಸಿಯೇಷನ್ ಹೇಳಿಕೆಯಲ್ಲಿ ತಿಳಿಸಿದೆ. ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಜನಿಕ ಸೇವೆ ಹಿನ್ನೆಲೆಯಲ್ಲಿ AIIMSನ ವೈದ್ಯರ ಸಂಘ 11 ದಿನಗಳ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಅಲ್ಲದೆ RML, IGH ವೈದ್ಯರು ಸಹ ತಮ್ಮ ಮುಷ್ಕರ ಹಿಂಪಡೆದಿದ್ದಾರೆ.

ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಘಟನೆ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಮತ್ತು ದೇಶಾದ್ಯಂತ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಭದ್ರತೆಯ ಸಮಸ್ಯೆಯನ್ನು ಪರಿಹರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಪ್ರಾಮಾಣಿಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇವೆ ಎಂದು ಅಸೋಸಿಯೇಷನ್ ತಿಳಿಸಿದೆ.

ಪ್ರತಿಭಟನಾಕಾರರು ಕಳವಳಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ನಿಂದ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಲು ಸಂಘವು ಒಪ್ಪಿಕೊಂಡಿದೆ. ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳನ್ನು ಬಲವಾಗಿ ಒತ್ತಾಯಿಸುವುದಾಗಿ ಹೇಳಿದೆ. ಪ್ರತಿಭಟನಾನಿರತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ವೈದ್ಯರ ಮಂಡಳಿ ಶ್ಲಾಘಿಸಿದೆ.

ಸುರಕ್ಷತಾ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವವರೆಗೆ ಕೆಲಸದ ಸಮಯದ ನಂತರ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಸಂಘ ತಿಳಿಸಿದೆ. "ರೋಗಿಗಳ ಆರೈಕೆ" ನಮ್ಮ ಅತ್ಯಂತ ಆದ್ಯತೆಯಾಗಿದ್ದು, ಅದನ್ನು ಎತ್ತಿಹಿಡಿಯಲು ಸಮರ್ಪಿತರಾಗಿದ್ದೇವೆ. ನಮ್ಮ ಧ್ಯೇಯದಲ್ಲಿ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ. ನ್ಯಾಯ ಸಿಗುವವರೆಗೆ ಮತ್ತು ಸುರಕ್ಷತಾ ಮಾರ್ಗಸೂಚಿಗಳ ಅನುಷ್ಠಾನದವರೆಗೆ ನಾವು ಸಾಂಕೇತಿಕ ಪ್ರತಿಭಟನೆಯ ಮೂಲಕ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT