ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಒಂದು ಅರ್ಜಿಗೆ ಮಾತ್ರ ಸಿಬಿಐ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿದೆ. ಅದೂ ಕೂಡ ಗುರುವಾರ ರಾತ್ರಿ 8 ಗಂಟೆಗೆ ಸಲ್ಲಿಸಲಾಗಿದೆ ಎಂದು ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ತಿಳಿಸಿದರು.

ಅರವಿಂದ್ ಕೇಜ್ರಿವಾಲ್
Shilpa D
Updated On : 23 Aug 2024, 2:19 pm

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐಗೆ ಈ ಪ್ರಕರಣದಲ್ಲಿ ತನ್ನ ಪ್ರತಿವಾದ ಮತ್ತು ಅಫಿಡವಿಟ್ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತು ಮತ್ತು ಕೇಜ್ರಿವಾಲ್‌ಗೆ ಮರು ಅರ್ಜಿ ಸಲ್ಲಿಸಲು ಎರಡು ದಿನಗಳ ಕಾಲಾವಕಾಶ ನೀಡಿತು. ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಒಂದು ಅರ್ಜಿಗೆ ಮಾತ್ರ ಸಿಬಿಐ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿದೆ. ಅದೂ ಕೂಡ ಗುರುವಾರ ರಾತ್ರಿ 8 ಗಂಟೆಗೆ ಸಲ್ಲಿಸಲಾಗಿದೆ ಎಂದು ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಎಸ್‌.ವಿ ರಾಜು, ಇನ್ನೊಂದು ಅರ್ಜಿಗೆ ಪ್ರತಿಯಾಗಿ ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು. ಹೀಗಾಗಿ ಸೆಪ್ಟೆಂಬರ್ 5ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿತು. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೂನ್ 26 ರಂದು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು . ಮಾರ್ಚ್ 21 ರಂದು ಇಡಿಯಿಂದ ಬಂಧಿಸಲ್ಪಟ್ಟಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 20 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಜಾಮೀನು ನೀಡಿತ್ತು. ಆದರೆ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜುಲೈ 12 ರಂದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತು.

Advertisement

Advertisement

Also Read

ಅರವಿಂದ್ ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments