ಕೋಲ್ಕತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ 
ದೇಶ

Kolkata Rape-Murder: ಘಟನಾ ಸ್ಥಳದ ಸಿಸಿಟಿವಿಯಲ್ಲಿ ಆರೋಪಿ ಸೆರೆ; ಅತ್ಯಾಚಾರಕ್ಕೂ ಮುನ್ನ ಎರಡು ವೇಶ್ಯಾಗೃಹಕ್ಕೆ ಹೋಗಿದ್ದ!

ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖಾಧಿಕಾರಿಗಳು ಶಂಕಿತ ವ್ಯಕ್ತಿ ಮಧ್ಯರಾತ್ರಿಯ ನಂತರ ಅಂದರೆ ಅಪರಾಧ ನಡೆದ ಒಂದು ಗಂಟೆಯ ನಂತರ ಆಸ್ಪತ್ರೆಗೆ ಪ್ರವೇಶಿಸಿದ ಸಿಸಿಟಿವಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ಕೋಲ್ಕತ್ತಾ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಘಟನಾ ಸ್ಥಳದ ಸಿಸಿಟಿವಿಯಲ್ಲಿ ಸೆರೆಯಾಗಿದ್ದಾನೆ.

ಹೌದು.. ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖಾಧಿಕಾರಿಗಳು ಶಂಕಿತ ವ್ಯಕ್ತಿ ಮಧ್ಯರಾತ್ರಿಯ ನಂತರ ಅಂದರೆ ಅಪರಾಧ ನಡೆದ ಒಂದು ಗಂಟೆಯ ನಂತರ ಆಸ್ಪತ್ರೆಗೆ ಪ್ರವೇಶಿಸಿದ ಸಿಸಿಟಿವಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ಶಂಕಿತ ವ್ಯಕ್ತಿಯ ಕುತ್ತಿಗೆಗೆ ಬ್ಲೂಟೂತ್ ಇಯರ್‌ಫೋನ್ ಹಾಕಿಕೊಂಡು ಹೊರಗೆ ಬರುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳೆಯ ಶವ ಪತ್ತೆಯಾದ ನಂತರ ಪ್ರಾಥಮಿಕ ತನಿಖೆಯಲ್ಲಿ ಅಪರಾಧ ನಡೆದ ಸ್ಥಳದಿಂದ ಬ್ಲೂಟೂತ್ ಇಯರ್‌ಫೋನ್‌ಗಳು ಪತ್ತೆಯಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಂಜಯ್ ರಾಯ್ ಮುಂಜಾನೆ 1.03 ಗಂಟೆಗೆ ಆಸ್ಪತ್ರೆಗೆ ಪ್ರವೇಶಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ. ಅಂತೆಯೇ ವಿಚಾರಣೆ ವೇಳೆ ಪೊಲೀಸರು ಆತನಿಗೆ ಇದೇ ಸಿಸಿಟಿವಿ ಸಾಕ್ಷ್ಯವನ್ನು ತೋರಿಸಿದ್ದು, ನಂತರ ಸಂಜಯ್ ರಾಯ್ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೊಲೆಗೂ ಮುನ್ನ ವೇಶ್ಯಾಗೃಹಗಳಿಗೆ ಹೋಗಿದ್ದ ಆರೋಪಿ

ಇನ್ನು ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆಯಾದ ರಾತ್ರಿ 1.03 ಗಂಟೆಗೆ ಆಸ್ಪತ್ರೆ ತಲುಪುವ ಮುನ್ನ ಸಂಜಯ್ ರಾಯ್ ಕೋಲ್ಕತ್ತಾದ ಎರಡು ವೇಶ್ಯಾಗೃಹಗಳಿಗೆ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಆಗಸ್ಟ್ 8 ರಂದು ರಾತ್ರಿ ರೆಡ್ ಲೈಟ್ ಏರಿಯಾ ಸೋನಾಗಚಿಗೆ ಹೋಗಿ ಮದ್ಯ ಸೇವಿಸಿ ಎರಡು ವೇಶ್ಯಾಗೃಹಗಳಿಗೆ ಒಂದರ ನಂತರ ಒಂದರಂತೆ ಭೇಟಿ ನೀಡಿದ್ದ.

ನಂತರ ಆತ ಮಧ್ಯರಾತ್ರಿ ಆಸ್ಪತ್ರೆಗೆ ಹೋಗಿದ್ದಾನೆ. ಈ ವೇಳೆ ಆತ ಸಂತ್ರಸ್ಥ ಮಹಿಳೆ ಇದ್ದ ಸೆಮಿನಾರ್ ಹಾಲ್‌ಗೆ ಪ್ರವೇಶಿಸುವುದು ಮತ್ತು ಹೊರಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದ್ದು, ಅಲ್ಲಿ ಜೂನಿಯರ್ ವೈದ್ಯರು ಮಲಗಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾದ ವಿಶೇಷ ನ್ಯಾಯಾಲಯ ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆಗೆ ನಿನ್ನೆ ಅನುಮತಿ ನೀಡಿದ್ದು, ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ವೈದ್ಯರಿಗೆ ಆಗಸ್ಟ್ 8-9ರ ಮಧ್ಯರಾತ್ರಿಯಲ್ಲಿ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?