ಅಮೇಥಿ: ಕೋಲ್ಕತಾ ಅತ್ಯಾಚಾರ-ಕೊಲೆ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಅತ್ತ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಮತ್ತು ಬಲವಂತದ ಮತಾಂತರ ಆರೋಪ ಕೇಳಿಬಂದಿದೆ.
ಉತ್ತರ ಪ್ರದೇಶದ ಅಮೇಥಿಯಲ್ಲಿ 18 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಮೂಲಗಳ ಪ್ರಕಾರ ಜುಲೈ 5 ರಂದು ಅಮೇಥಿಯ ರಾಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶನಿವಾರ ಮಹಿಳೆ ದೂರು ದಾಖಲಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬ ತನ್ನನ್ನು ಆಮಿಷಕ್ಕೆ ಒಳಪಡಿಸಿ ನನ್ನ ಮೇಲೆ ಅತ್ಯಾಚಾರ ಮಾಡಿ ಇಸ್ಲಾಂಗೆ ಮತಾಂತರಗೊಳ್ಳಲು ಕೆಲವು ಪೇಪರ್‌ಗಳಿಗೆ ಸಹಿ ಹಾಕುವಂತೆ ವಂಚಿಸಲಾಗಿದೆ. ಇಸ್ಲಾಂಗೆ ಮತಾಂತರಗೊಳ್ಳಲು ನಿರಾಕರಿಸಿದಾಗ ಆರೋಪಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಹೇಳಿದ್ದಾಳೆ ಎಂದು ಠಾಣಾಧಿಕಾರಿ ಯಜೇಂದ್ರ ಪಟೇಲ್ ಹೇಳಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ, ಶನಿವಾರ ಉತ್ತರ ಪ್ರದೇಶ ಪೊಲೀಸರು ಕಾನೂನುಬಾಹಿರ ಧರ್ಮದ ಮತಾಂತರ ನಿಷೇಧ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು.