ವೈದ್ಯರ ಪ್ರತಿಭಟನೆ 
ದೇಶ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ, ಇತರರಿಗೆ 2ನೇ ಸುತ್ತಿನ ಪಾಲಿಗ್ರಾಫ್ ಪರೀಕ್ಷೆ

ಘೋಷ್ ಅವರು ವಿಚಾರಣೆಯ ಸಮಯದಲ್ಲಿ ಅಸಮಂಜಸವಾದ ಉತ್ತರಗಳನ್ನು ನೀಡಿದ್ದಾರೆ. ಹೀಗಾಗಿ ಅವರನ್ನು ಮತ್ತೊಂದು ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗಿದೆ.

ಕೋಲ್ಕತ್ತಾ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ಪ್ರಕರಣದ ತನಿಖೆಯ ಭಾಗವಾಗಿ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ (ಆರ್‌ಜಿಕೆಎಂಸಿಎಚ್) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ಐವರಿಗೆ ಸಿಬಿಐ ಸೋಮವಾರ ಎರಡನೇ ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಿದೆ.

ಅಧಿಕಾರಿಯೊಬ್ಬರ ಪ್ರಕಾರ, ಕಳೆದ 10 ದಿನಗಳಲ್ಲಿ, ಘೋಷ್ ಅವರು ವಿಚಾರಣೆಯ ಸಮಯದಲ್ಲಿ ಅಸಮಂಜಸವಾದ ಉತ್ತರಗಳನ್ನು ನೀಡಿದ್ದಾರೆ. ಹೀಗಾಗಿ ಅವರನ್ನು ಮತ್ತೊಂದು ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಿಬಿಐ ಆರಂಭದಲ್ಲಿ ಕಳೆದ ಶನಿವಾರ ಘೋಷ್ ಮತ್ತು ಇತರ ಐವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿತ್ತು. ನಂತರ ಬಂಧಿತ ಆರೋಪಿ ಸಂಜಯ್ ರಾಯ್ ನನ್ನು ಭಾನುವಾರ ಪ್ರೆಸಿಡೆನ್ಸಿ ಕರೆಕ್ಷನಲ್ ಹೋಮ್‌ನಲ್ಲಿ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಮರುದಿನ ಅಪರಾಧಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ನನ್ನು ಬಂಧಿಸಲಾಯಿತು.

ಈ ಭೀಕರ ಕೃತ್ಯವನ್ನು ಖಂಡಿಸಿ ವೈದ್ಯರು ಮತ್ತು ಸಾರ್ವಜನಿಕರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT