ಜಮ್ಮು-ಕಾಶ್ಮೀರದಲ್ಲಿ ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿರುವ ಮಂದಿ (ಸಂಗ್ರಹ ಚಿತ್ರ) online desk
ದೇಶ

ಜಮ್ಮು-ಕಾಶ್ಮೀರ ಚುನಾವಣೆ: 15 ಅಭ್ಯರ್ಥಿಗಳ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಕೇಂದ್ರಾಡಳಿತ ಪ್ರದೇಶದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ 15 ಅಭ್ಯರ್ಥಿಗಳ ಪರಿಷ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಪರಿಷ್ಕೃತ ಪಟ್ಟಿಯಲ್ಲಿ 15 ಮಂದಿ ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.

ಇದಕ್ಕೂ ಮುನ್ನ 44 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಆದರೆ ತಕ್ಷಣವೇ ಅದನ್ನು ಹಿಂಪಡೆದು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 19, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ. 2019 ರಲ್ಲಿ ಆರ್ಟಿಕಲ್ 370 ರದ್ದುಗೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಯುತ್ತಿದೆ. 2014 ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಕೊನೆಯದಾಗಿ ವಿಧಾನಸಭಾ ಚುನಾವಣೆಗಳು ನಡೆದಿದ್ದವು. ಬಿಜೆಪಿ 25 ಸ್ಥಾನಗಳಲ್ಲಿ ಗೆದ್ದಿದ್ದರೆ, ಪಿಡಿಪಿ 28, ಎನ್ ಸಿ 15, ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT