ಕಂಗನಾ ರಣಾವತ್ 
ದೇಶ

‘ಕಂಗನಾಗೆ ಪಕ್ಷದ ನೀತಿ ಬಗ್ಗೆ ಮಾತನಾಡುವ ಅಧಿಕಾರ ಇಲ್ಲ’: ಮಂಡಿ ಸಂಸದೆಗೆ ಬಿಜೆಪಿ ತರಾಟೆ

ದೇಶದಲ್ಲಿ ಬಾಂಗ್ಲಾದೇಶದಂತಹ ಅರಾಜಕತೆ ಸೃಷ್ಟಿಸಲು ರೈತರ ಪ್ರತಿಭಟನೆಯಲ್ಲಿ ಯೋಜನೆ ರೂಪಿಸಲಾಗಿತ್ತು ಎಂದು ಕಂಗನಾ ರಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ನವದೆಹಲಿ: ರೈತರ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಕೇಸರಿ ಪಕ್ಷ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡದಂತೆ ನಿರ್ದೇಶನ ನೀಡಿದೆ.

ದೇಶದಲ್ಲಿ ಬಾಂಗ್ಲಾದೇಶದಂತಹ ಅರಾಜಕತೆ ಸೃಷ್ಟಿಸಲು ರೈತರ ಪ್ರತಿಭಟನೆಯಲ್ಲಿ ಯೋಜನೆ ರೂಪಿಸಲಾಗಿತ್ತು ಎಂದು ಕಂಗನಾ ರಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಎಕ್ಸ್ ನಲ್ಲಿ ಮಂಡಿ ಸಂಸದೆ ಹಂಚಿಕೊಂಡ ವಿಡಿಯೋದಲ್ಲಿ, ಈಗ ರದ್ದಾದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಂದರ್ಭದಲ್ಲಿ "ಹೆಣಗಳು ನೇತಾಡುತ್ತಿದ್ದವು ಮತ್ತು ಅತ್ಯಾಚಾರಗಳು ನಡೆದಿವೆ" ಎಂದು ಆರೋಪಿಸಿದ್ದಾರೆ.

ಕಂಗನಾ ಹೇಳಿಕೆ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, "ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಪಕ್ಷದ ಅಭಿಪ್ರಾಯವಲ್ಲ. ಸಂಸದೆಯ ರೈತ ವಿರೋಧಿ ಹೇಳಿಕೆ ಒಪ್ಪಲು ಸಾಧ್ಯವಿಲ್ಲ" ಎಂದು ಹೇಳಿದೆ.

ಬಿಜೆಪಿ ಪರವಾಗಿ, ಪಕ್ಷದ ಮತ್ತು ಸರ್ಕಾರದ ನೀತಿಗಳ ಕುರಿತು ಹೇಳಿಕೆ ನೀಡಲು ಕಂಗನಾ ರಣಾವತ್ ಅವರಿಗೆ ಅನುಮತಿ ಇಲ್ಲ ಅಥವಾ ಅಧಿಕಾರ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಕಂಗನಾ ರಣಾವತ್‌ ಅವರಿಗೆ ಭವಿಷ್ಯದಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಇಂತಹ ಯಾವುದೇ ಹೇಳಿಕೆಗಳನ್ನು ನೀಡದಂತೆ ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಾರತೀಯ ಜನತಾ ಪಕ್ಷವು 'ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ ಮತ್ತು ಸಬ್ಕಾ ಪ್ರಯಾಸ್' ಮತ್ತು ಸಾಮಾಜಿಕ ಸಾಮರಸ್ಯದ ತತ್ವಗಳನ್ನು ಅನುಸರಿಸಲು ಬದ್ಧವಾಗಿದೆ" ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್