ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ 
ದೇಶ

ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್; 3 ಸಾವು, ಇಬ್ಬರ ಸ್ಥಿತಿ ಗಂಭೀರ

ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಮುಂಜಾನೆ 4.30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ವೊಂದು ನೇರವಾಗಿ ಫುಟ್‌ಪಾತ್‌ ಮೇಲೆ ಹತ್ತಿದ್ದು, ಅಲ್ಲಿ ಮಲಗಿದ್ದ ಐವರ ಮೇಲೆ ಹರಿದಿದೆ.

ನವದೆಹಲಿ: ಫುಟ್ಪಾತ್ ಮೇಲೆ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಮುಂಜಾನೆ 4.30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ವೊಂದು ನೇರವಾಗಿ ಫುಟ್‌ಪಾತ್‌ ಮೇಲೆ ಹತ್ತಿದ್ದು, ಅಲ್ಲಿ ಮಲಗಿದ್ದ ಐವರ ಮೇಲೆ ಹರಿದಿದೆ.

ಈ ವೇಳೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡವರನ್ನು ಶಾಸ್ತ್ರಿ ಪಾರ್ಕ್ ಕೊಳೆಗೇರಿ ನಿವಾಸಿಗಳಾದ ಮುಸ್ತಾಕ್ (35), ಗಾಂಧಿನಗರ ನಿವಾಸಿ ಕಮಲೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಅದರ ದಾಖಲೆಗಳ ಮೂಲಕ ಮಾಲೀಕರನ್ನು ಸಂಪರ್ಕಿಸುತ್ತಿದ್ದಾರೆ.

ನಿದ್ರೆಯೇ ದುರಂತಕ್ಕೆ ಕಾರಣ

ಚಾಲಕ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಕಾರಣದ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಸಮೀಪದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ನಿರ್ಲಕ್ಷ್ಯದ ಚಾಲನೆಯಿಂದ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT