ಕೆ ಕವಿತಾ 
ದೇಶ

BRS ನಾಯಕಿ ಕೆ ಕವಿತಾ ತಿಹಾರ್ ಜೈಲಿನಿಂದ ಬಿಡುಗಡೆ

ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದ ನಂತರ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಆದೇಶ ನೀಡಿತ್ತು.

ಮಹಿಳಾ ಜಾಮೀನಿಗೆ ಸಂಬಂಧಿಸಿದ ಶಾಸನಬದ್ಧ ನಿಬಂಧನೆಗಳ ಆಧಾರದ ಮೇಲೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನ ತೀರ್ಪು ದೋಷಪೂರಿತವಾಗಿದ್ದು, ಅದನ್ನು ರದ್ದುಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾನೂನು ಮೇಲುಗೈ ಸಾಧಿಸಿದೆ. ಕಾನೂನು ಕ್ರಮ ಕೈಗೊಳ್ಳುತ್ತದೆ. ಇದು ದೋಷಪೂರಿತ ಪ್ರಕರಣ ಎಂದು ಇಡೀ ದೇಶಕ್ಕೆ ತಿಳಿದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP