ದೆಹಲಿ ಸಿಎಂ ಆರವಿಂದ್ ಕೇಜ್ರಿವಾಲ್ 
ದೇಶ

Excise Policy Case: ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆ.3 ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.

ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ನ್ಯಾಯಾಂಗದ ಅವಧಿ ಮುಗಿದ ನಂತರ ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಜ್ರಿವಾಲ್ ವಿರುದ್ಧ ಸಲ್ಲಿಸಿರುವ ಪೂರಕ ಆರೋಪ ಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೆ ಎಂಬುದರ ಕುರಿತು ನ್ಯಾಯಾಲಯವು ಪ್ರಸ್ತುತ ಸಿಬಿಐ ವಾದಗಳನ್ನು ಆಲಿಸುತ್ತಿದೆ.

ಇದೇ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಕ್ರಮವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಆಪಾದಿತ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಕವಿತಾ ಅವರ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಕೋರಿದ್ದು, ಆಕೆಯ ವಿರುದ್ಧದ ತನಿಖೆಯನ್ನು ಈಗಾಗಲೇ ಎರಡು ಸಂಸ್ಥೆಗಳು ಪೂರ್ಣಗೊಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್