ಅಪಘಾತ 
ದೇಶ

ಅರುಣಾಚಲ ಪ್ರದೇಶ: ಕಂದಕಕ್ಕೆ ಸೇನಾ ಟ್ರಕ್ ಉರುಳಿ ಮೂವರು ಸೇನಾಧಿಕಾರಿಗಳು ಸಾವು; ಹಲವರಿಗೆ ಗಾಯ

ತಾಪಿ ಗ್ರಾಮದ ಬಳಿಯ ಟ್ರಾನ್ಸ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಹವಾಲ್ದಾರ್ ಮಖತ್ ಸಿಂಗ್, ನಾಯ್ಕ್ ಮುಖೇಶ್ ಕುಮಾರ್, ಗ್ರೆನೇಡಿಯರ್ ಆಶಿಶ್ ಕುಮಾರ್ ಎಂದು ಗುರುತಿಸಲಾಗಿದೆ.

ಇಟಾನಗರ: ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಸೇನಾ ಟ್ರಕ್ ಉರುಳಿದ ಪರಿಣಾಮ ಮೂವರು ಸೇನಾಧಿಕಾರಿಗಳು ಮೃತಪಟ್ಟು, ನಾಲ್ವರ ಗಾಯಗೊಂಡಿರುವ ಘಟನೆ ಅರುಣಾಚಲಪ್ರದೇಶದ ಸುಬಾನ್ಸಿರಿ ಜಿಲ್ಲೆಯಲ್ಲಿ ನಡೆದಿದೆ.

ತಾಪಿ ಗ್ರಾಮದ ಬಳಿಯ ಟ್ರಾನ್ಸ್ ಅರುಣಾಚಲ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಹವಾಲ್ದಾರ್ ಮಖತ್ ಸಿಂಗ್, ನಾಯ್ಕ್ ಮುಖೇಶ್ ಕುಮಾರ್, ಗ್ರೆನೇಡಿಯರ್ ಆಶಿಶ್ ಕುಮಾರ್ ಎಂದು ಗುರುತಿಸಲಾಗಿದೆ.

ಅಪಘಾತಕ್ಕೀಡಾದ ಸೇನಾ ಟ್ರಕ್ ಸಿಬ್ಬಂದಿಯನ್ನು ಸಾಗಿಸುವ ಬೆಂಗಾವಲು ಪಡೆಯ ಭಾಗವಾಗಿತ್ತು. ಟ್ರಕ್ ಸುಬಾನ್ಸಿರಿಯ ಜಿಲ್ಲಾ ಕೇಂದ್ರ ಪಟ್ಟಣವಾದ ದಪೋರಿಜೋದಿಂದ ಲೆಪರಾಡಾ ಜಿಲ್ಲೆಯ ಬಸರ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹಗಳನ್ನು ಹೊರತೆಗೆಯಲು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ