ಮಮತಾ ಬ್ಯಾನರ್ಜಿ online desk
ದೇಶ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ: ಮಮತಾ ಭರವಸೆ

ಒಂದು ವೇಳೆ ರಾಜ್ಯಪಾಲರು ತಿದ್ದುಪಡಿ ಮಸೂದೆಗೆ ಒಪ್ಪಿಗೆ ನೀಡಲು ವಿಳಂಬ ಮಾಡಿದರೆ ಅಥವಾ ರಾಷ್ಟ್ರಪತಿಗಳಿಗೆ ರವಾನಿಸಿದರೆ ರಾಜಭವನದ ಹೊರಗೆ ಧರಣಿ ನಡೆಸುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೋಲ್ಕತ್ತಾ: ಅತ್ಯಾಚಾರ ಪ್ರಕರಣಗಳ ಬಗ್ಗೆ ತಮ್ಮ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂದು ಪ್ರತಿಪಾದಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಪರಾಧಿಗಳಿಗೆ ಮರಣದಂಡನೆ ಖಚಿತಪಡಿಸಿಕೊಳ್ಳಲು ಅಸ್ತಿತ್ವದಲ್ಲಿರುವ ಕಾನೂನುಗಳಿಗೆ ತಿದ್ದುಪಡಿ ಮಾಡಲು ಮುಂದಿನ ವಾರ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಲಾಗುವುದು ಎಂದು ಬುಧವಾರ ಹೇಳಿದ್ದಾರೆ.

ಒಂದು ವೇಳೆ ರಾಜ್ಯಪಾಲರು ತಿದ್ದುಪಡಿ ಮಸೂದೆಗೆ ಒಪ್ಪಿಗೆ ನೀಡಲು ವಿಳಂಬ ಮಾಡಿದರೆ ಅಥವಾ ರಾಷ್ಟ್ರಪತಿಗಳಿಗೆ ರವಾನಿಸಿದರೆ ರಾಜಭವನದ ಹೊರಗೆ ಧರಣಿ ನಡೆಸುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಟಿಎಂಸಿ ಶನಿವಾರದಿಂದ ಪ್ರತಿಭಟನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

"ಮುಂದಿನ ವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾವು ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುತ್ತೇವೆ. ನಂತರ ನಾವು ಅದನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸುತ್ತೇವೆ. ಅವರು ಮಸೂದೆಗೆ ಒಪ್ಪಿಗೆ ನೀಡದಿದ್ದರೆ ನಾವು ರಾಜಭವನದ ಹೊರಗೆ ಧರಣಿ ಮಾಡುತ್ತೇವೆ" ಎಂದು ದೀದಿ ಹೇಳಿದ್ದಾರೆ.

ಇದೇ ವೇಳೆ ಕಳೆದ 20 ದಿನಗಳಿಂದ ಕೆಲಸ ಸ್ಥಗಿತಗೊಳಿಸಿರುವ ಬಂಗಾಳದ ಧರಣಿ ನಿರತ ಕಿರಿಯ ವೈದ್ಯರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದರು.

"ವೈದ್ಯರು ತಮ್ಮ ಸಹೋದ್ಯೋಗಿಯ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಅವರ ಬಗ್ಗೆ ಸಹಾನುಭೂತಿ ಹೊಂದಿದ್ದೇನೆ. ಘಟನೆ ನಡೆದು ಹಲವು ದಿನಗಳು ಕಳೆದರೂ ನಾವು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ನಿಮ್ಮ ನೋವು ನಮಗೆ ಅರ್ಥವಾಗುತ್ತದೆ. ಆದರೆ ದಯವಿಟ್ಟು ರೋಗಿಗಳ ಆರೈಕೆಗಾಗಿ ಕೆಲಸಕ್ಕೆ ಹಿಂತಿರುಗಿ” ಎಂದು ಮಮತಾ ಮನವಿ ಮಾಡಿದರು.

ಇದೇ ವೇಳೆ 12 ಗಂಟೆಗಳ ಬಂದ್‌ಗೆ ಕರೆ ನೀಡಿರುವ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬ್ಯಾನರ್ಜಿ, “ಹೆಣದ ಮೇಲೆ ರಾಜಕೀಯ ಲಾಭ ಪಡೆಯಲು ಅವರು ಬಂದ್‌ಗೆ ಕರೆ ನೀಡಿದ್ದಾರೆ. ಸಾವಿನ ಮನೆಯಲ್ಲಿ ಬಿಜೆಪಿ ಸಾಮಾನ್ಯ ಜನರ ಭಾವನೆಗಳನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ. ಸಂತ್ರಸ್ತೆಗೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಸಿಗದಂತೆ ವೈದ್ಯೆಯ ಸಾವಿನ ತನಿಖೆಯನ್ನು ಹಳಿತಪ್ಪಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT