ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ ಎನ್ಕೌಂಟರ್: ಕುಪ್ವಾರದಲ್ಲಿ ಮೂವರು ಉಗ್ರರ ಸದೆಬಡಿದ ಸೇನಾಪಡೆ, ರಜೌರಿಯಲ್ಲಿ ಮುಂದುವರೆದ ಕಾರ್ಯಾಚರಣೆ

ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು.

ಕುಪ್ವಾರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿದಿದೆ ಎಂದು ಗುರುವಾರ ತಿಳಿದುಬಂದಿದೆ.

ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಇದರಂತೆ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರೆಸಿದೆ.

ಈ ನಡುವೆ ರಜೌರಿಯಲ್ಲಿಯೂ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಕಾಳಗ ಮುಂದುವರೆದಿದ್ದು, ಸೇನಾಪಡೆ ಎನ್ಕೌಂಟರ್ ಆರಂಭಿಸಿದೆ.

ಖೇರಿ ಮೊಹ್ರಾ ಲಾಠಿ ಮತ್ತು ದಂತಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ 9:30ರ ಸುಮಾರಿಗೆ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೇನಾಪಡೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

"ಶೋಧನಾ ಕಾರ್ಯಾಚರಣೆ ವೇಳೆ ರಾತ್ರಿ 11:45 ರ ಸುಮಾರಿಗೆ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಈ ವೇಳೆ ಸೇನಾಪಡೆ ಕೂಡ ದಿಟ್ಟ ಉತ್ತರ ನೀಡಿದ್ದು, ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಸ್ಥಳ ಸುತ್ತುವರೆದಿರುವ ಸೇನಾಪಡೆ ಉಗ್ರರ ಸದೆಬಡಿಯಲು ಕಾರ್ಯಾಚರಣೆ ಮುಂದುವರೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೃಹ ಜ್ಯೋತಿ ಜುಲೈ 1 ರಿಂದ ಫಲಾನುಭವಿಗಳ ಪರಿಶೀಲನೆ; ಅಗತ್ಯವಿರುವ ದಾಖಲೆಗಳ ಬಗ್ಗೆ ಇಲ್ಲಿದೆ ಮಾಹಿತಿ...

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಜುಲೈ 6ರಂದು ಟ್ರಸ್ಟ್ ಮಹತ್ವದ ಸಭೆ!

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

ಟ್ರಂಪ್ ಗೆ ಮತ್ತೆ ಹಿನ್ನಡೆ: ಜನ್ಮಸಿದ್ಧ ಪೌರತ್ವ ಎತ್ತಿಹಿಡಿದ US ಸುಪ್ರೀಂ ಕೋರ್ಟ್

ರಾಜ್ಯದಲ್ಲಿ ಜುಲೈ 6ರವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ IMD ಆರೆಂಜ್ ಅಲರ್ಟ್ ಘೋಷಣೆ